ಶಾಲಾ ವಾಹನ ಚಾಲಕರ ಸಂಘದ ಸಭೆ : ಸಂಚಾರಿ ನಿಯಮ ಪಾಲಿಸಲು ಸಲಹೆ

9:30 AM, Friday, January 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

drivers

ಮಡಿಕೇರಿ : ವಾಹನ ಚಾಲಕರು ಅಗತ್ಯ ದಾಖಲೆಗಳೊಂದಿಗೆ ಸಂಚಾರಿ ನಿಯಮವನ್ನು ಪಾಲಿಸಬೇಕೆಂದು ನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಬೆಳ್ಳಿಯಪ್ಪ ಅವರು ಸಲಹೆ ನೀಡಿದ್ದಾರೆ.

ನಗರದಲ್ಲಿ ನಡೆದ ಮಡಿಕೇರಿ ಶಾಲಾ ವಾಹನ ಚಾಲಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಚಾಲಕರು ಅನಾರೋಗ್ಯಕರ
ವೇಗದ ಪೈಪೋಟಿಗೆ ಆದ್ಯತೆ ನೀಡದೆ ಸುರಕ್ಷತೆ ಬಗ್ಗೆ ಗಮನ ಹರಿಸಬೇಕೆಂದರು. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಅತಿವೇಗ, ದಾಖಲೆ ರಹಿತ ಚಾಲನೆ ಸೇರಿದಂತೆ ಸಂಚಾರಿ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಚಾಲಕರ ಸಂಘದ ಪದಾಧಿಕಾರಿಗಳ ಮಾಹಿತಿಯನ್ನು ಸಲ್ಲಿಸಿ ಕಾನೂನು ಬದ್ಧವಾಗಿ ಸಂಘವನ್ನು ಮುನ್ನಡೆಸುವಂತೆ ಬೆಳ್ಳಿಯಪ್ಪ ಸಲಹೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನ ಚಾಲಕರ ಕರ್ತವ್ಯ ಇಂದು ಮಹತ್ವವನ್ನು ಪಡೆದುಕೊಂಡಿದ್ದು, ಜವಬ್ದಾರಿಯುತವಾದ ಈ ಸೇವೆಯಲ್ಲಿ ತೊಡಗಿರುವವರು ಕಾನೂನು ಪಾಲನೆಗೆ ಆದ್ಯತೆ ನೀಡಬೇಕೆಂದು ತಿಳಿಸಿದರು. ಚಾಲಕ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದ ಅವರು ಸಾಮಾಜಿಕ ಕಳಕಳಿಯ ಸಂಘ, ಸಂಸ್ಥೆಗಳಿಗೆ ತಮ್ಮಿಂದಾದ ಸಹಾಯ ಮಾಡಿ ಎಂದು ಚಾಲಕರಿಗೆ ಕರೆ ನೀಡಿದರು.

ವಿಕಾಸ ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ರಮೇಶ್ ಮಾತನಾಡಿದರು. ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್, ಸಂಚಾರಿ ಠಾಣಾ ಉಪಠಾಣಾಧಿಕಾರಿ ಪದ್ಮನಾಭ ಮತ್ತಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English