ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವ

12:53 PM, Friday, January 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

pejavara

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವವು ಗುರುವಾರ ನಡೆಯಿತು.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪೇಜಾವರ ಶ್ರೀಗಳ ಭಾವಚಿತ್ರದ ಎದುರು ದೀಪ ಬೆಳಗಿಸಿ ನುಡಿನಮನ ಸಲ್ಲಿಸಿದರು.

ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪೇಜಾವರ ಮಠ, ತಲಪಾಡಿಯ ಕಣ್ವತೀರ್ಥ ಮಠ, ಪೇಜಾವರ ಮೂಲಮಠ, ಪೆರ್ಣಂಕಿಲ ದೇವಸ್ಥಾನ, ಮುಚ್ಚಲ ಕೋಡು ದೇವಸ್ಥಾನ, ವಿದ್ಯೋದಯ ಸಮೂಹ ಸಂಸ್ಥೆ, ಪಾಜಕದ ಆನಂದ ತೀರ್ಥ ವಿದ್ಯಾಲಯ, ರಾಮಕುಂಜದ ವಿದ್ಯಾಸಂಸ್ಥೆಗಳಲ್ಲಿ ಶ್ರೀಗಳ ಸ್ಮರಣೆ, ಅನ್ನಸಂತರ್ಪಣೆ ನಡೆಯಿತು. ವಿವಿಧ ಸಂಘ ಸಂಸ್ಥೆಗಳಲ್ಲಿ ಭಜನೆಗಳ ಮೂಲಕ ಗೌರವಾರ್ಪಣೆ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ಪೀಣ್ಯ, ಕನಕಪುರ, ನಾಗರಬಾವಿ, ಸಂಜಯನಗರ, ಗಿರಿನಗರ, ಕೋಣನಕುಂಟೆ ಮೊದಲಾ ದೆಡೆ, ಬಳ್ಳಾರಿ, ಮೈಸೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮೊದಲಾದೆಡೆ ಅನ್ನಸಂತರ್ಪಣೆ, ಸಂಸ್ಮರಣೆ ಜರಗಿತು.

ಸ್ವಾಮೀಜಿಯವರನ್ನು ವೃಂದಾವನ ಮಾಡಿದ ಸ್ಥಳ ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಯತಿಗಳ ಸಮಾವೇಶ ನಡೆಯಿತು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರು, ಭಂಡಾರಕೇರಿ ಮಠದ ಶ್ರೀ ವಿದ್ಯೆಶತೀರ್ಥರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು, ಸೋಸಲೆ ಮಠದ ಶ್ರೀ ವಿದ್ಯಾಶ್ರೀಶತೀರ್ಥರು ಹಾಗೂ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ಶ್ರೀಪಾದರು ಸೇರಿದಂತೆ ಹಲವು ಯತಿಗಳ ಪಾಲ್ಗೊಂಡಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English