ಪಿರಿಯಾಪಟ್ಟಣ : ವಸೂಲಿ ಧಂದೆಯಲ್ಲಿ ಮುಳುಗಿರುವ ಶಾಸಕ ಕೆ.ಮಹದೇವ್ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವಿಲ್ಲ ಎಂದು ಮಾಜಿ ಸಚಿವ ಕೆ.ವೆಂಕಟೇಶ್ ಹರಿಹಾಯ್ದರು.
ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಶಾಸಕ ಕೆ.ಮಹದೇವ್‌ಗೆ ಸಾಮಾನ್ಯ ಜ್ಞಾನವಿಲ್ಲ: ಕಳೆದ ಮೂರು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ್ ಅವರನ್ನು ತಾಲೂಕಿನ ಮುತ್ತಿನ ಮುಳುಸೋಗೆ ಗ್ರಾಮಕ್ಕೆ ಕರೆತಂದು 300 ಕೋಟಿ ರೂ. ವೆಚ್ಚದಲ್ಲಿ 150 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿ ಕೆಲಸ ಪ್ರಾರಂಭಿಸಲು ಗುತ್ತಿಗೆದಾರನಿಗೆ ಶೇ.10 ಹಣ ನೀಡಿ ಕೆಲಸ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದರ ಫಲವಾಗಿ ಇಂದು ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿವೆ. ಇದರ ಬಗ್ಗೆ ಸಾಮಾನ್ಯ ಜ್ಞಾನವಿಲ್ಲದ ಕ್ಷೇತ್ರದ ಶಾಸಕ ಕೆ.ಮಹದೇವ್ ತಾಲೂಕಾದ್ಯಂತ ಸಾರ್ವಜನಿಕರ ಮುಂದೆ ಹೋಗಿ ಕೆರೆ ತುಂಬಿಸುವ ಕಾರ್ಯಕ್ಕೆ ಸಿದ್ಧರಾಮಯ್ಯ ಹಣ ನೀಡಲಿಲ್ಲ, ಕುಮಾರಸ್ವಾಮಿ ಕೈ ಕಾಲಿಡಿದು ನಾನು ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಛೇಡಿಸಿದರು.
ಇಂದಿನ ಶಾಸಕ ಕೆ.ಮಹದೇವ್ ಕಳೆದ ಒಂದುವರೆ ವರ್ಷದ ಅವಧಿಯಲ್ಲಿ ತಾಲೂಕಿಗೆ ಅಭಿವೃದ್ಧಿಗೆ ಎಷ್ಟು ಅನುದಾನ ತಂದಿದ್ದಾರೆ ಅವರ ಅನುದಾನದಲ್ಲಿ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಅದನ್ನು ಬಿಟ್ಟು ನನ್ನ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಎರಡೆರಡು ಬಾರಿ ಗುದ್ದಲಿಪೂಜೆ ಮಾಡುತ್ತ ಸಾರ್ವಜನಿಕರನ್ನು ಹಾಗೂ ಕಾರ್ಯಕರ್ತರನ್ನು ವಂಚಿಸುವ ಕೆಲಸ ಬಿಡಲಿ ಎಂದು ಸವಾಲೆಸೆದರು.
ಸರ್ಕಾರದಿಂದ ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ತಂದು ಸಮಗ್ರ ಅಭಿವೃದ್ಧಿಯ ಹಾಗೂ ಶ್ರೀ-ಸಾಮಾನ್ಯರ ಬಗ್ಗೆ ಚಿಂತಿ ಸಬೇಕಾದ ಶಾಸಕರ ತಮ್ಮ ಮಗನೊಡನೆ ಸೇರಿ ವಸೂಲಿ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.
ನನ್ನ ಅವಧಿಯಲ್ಲಿ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 57 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿತ್ತು ಆದರೆ ಗುತ್ತಿಗೆದಾರ ಕಮಿಷನ್ ನೀಡಲಿಲ್ಲ ಎಂದು ಅವನ್ನು ಕೆಲಸ ಮಾಡಲು ಬಿಡಲಿಲ್ಲ ಕಮಿಷನ್ ಹಣ ಕೊಟ್ಟ ನಂತರ ಕೆಲಸ ಮಾಡಲು ಅವಕಾಶ ಕೊಟ್ಟರು ಹೀಗಾಗಿ 2 ವರ್ಷ ಕಳೆದರೂ ಯುಜಿಡಿ ಕೆಲಸ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದ ಅವರು, ತಾಲೂಕಿನಲ್ಲಿ ಯಾವುದೇ ಗುತ್ತಿಗೆದಾರ ಕೆಲಸ ಪ್ರಾರಂಭಿಸುವ ಮೊದಲು ಇವರಿಗೆ ಕಮಿಷನ್ ಹಣ ನೀಡಬೇಕು ಇಲ್ಲದಿದ್ದರೆ ಕಾಮಗಾರಿ ನಡೆಯಲು ಬಿಡುವುದಿಲ್ಲ ಇದಕ್ಕಾಗಿಯೇ ತಾಲೂಕಿಗೆ ಯಾವ ಗುತ್ತಿಗೆದಾರರು ಕಾಲು ಹಾಕುತ್ತಿಲ್ಲ ಎಂದರು.
ಬಹಿರಂಗ ಚರ್ಚೆಗೆ ಸವಾಲ್ : ರಾಜ್ಯದಲ್ಲಿಯೇ ಅತಿ ಹೆಚ್ಚು ಸುಳ್ಳು ಹೇಳುವ ಶಾಸಕ ಎಂದರೆ, ಅದು ಪಿರಿಯಾಪಟ್ಟಣದ ಶಾಸಕ ಕೆ.ಮಹದೇವ್, ಇವರು ಮತ್ತು ಇವರ ಮಗ ಸೇರಿಕೊಂಡು ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮೋಸ ಮಾಡುವುದರಲ್ಲಿ ನಿರತರಾಗಿದ್ದಾರೆ. ನಾನು ಬಿಡುಗಡೆ ಮಾಡಿಸಿದ ಕೆಲಸಗಳಿಗೆ ಎರೆಡೆರಡು ಬಾರಿ ಗುದ್ದಲಿಪೂಜೆ ಮಾಡಿಸುತ್ತಿದ್ದಾರೆ, ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಎಷ್ಟು ಅನುದಾನ ತಂದಿದ್ದಾರೆ ಹಾಗೂ ನನ್ನ ಅವಧಿಯಲ್ಲಿ ನಾನು ಏನು ತಂದಿದ್ದೇನೆ ಎಂಬುದರ ಬಗ್ಗೆ ಚರ್ಚೆಗೆ ಬರಲಿ ಎಂದು ಮಾಜಿ ಸಚಿವ ಕೆ.ವೆಂಕಟೇಶ್ ಸವಾಲ್ ಎಸೆದರು.
Click this button or press Ctrl+G to toggle between Kannada and English