ಮಂಗಳೂರು : ಅಡ್ಯಾರ್ ನಲ್ಲಿ ಎನ್‌ಆರ್‌ಸಿ, ಸಿಎಎ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ

9:56 AM, Thursday, January 16th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

adyar

ಮಂಗಳೂರು : ಎನ್‌ಆರ್‌ಸಿ, ಸಿಎಎ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಬುಧವಾರದಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಮಂಗಳೂರು ಗೋಲಿಬಾರ್ ಪ್ರಕರಣದ ಬಳಿಕ ಮೊದಲ ಬಾರಿಗೆ ನಡೆದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್ ಅವರು ಎನ್‌ಆರ್‌ಸಿ, ಸಿಎಎಗೆ ತಮ್ಮ ವಿರೋಧ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ,ಅಮಿತ್ ಶಾ ಹಾಗೂ ಕೇಂದ್ರ ಸರಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ್ದರು.

adyar

ಇನ್ನೂ ಪ್ರತಿಭಟನೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಲಕ್ಷಾಂತರ ಮಂದಿ ಭಾಗವಹಿಸಿ, ರಾಷ್ಟ್ರ ಧ್ವಜ ಹಿಡಿದು ಎನ್‌ಆರ್‌ಸಿ, ಸಿಎಎ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದರು.

ಯಾವುದೇ ಗಲಭೆ ಘರ್ಷಣೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಕೆ.ಎಸ್.ಆರ್.ಪಿ, ಸಿಎಆರ್, ಆರ್.ಎ.ಎಫ್ ತುಕಡಿ ಸಹಿತ ಉಡುಪಿ, ಕಾರವಾರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪೊಲೀಸ್ ಪೋಲಿಸರನ್ನು ಭದ್ರತೆಗೆ ನಿಯೋಜನೆಗೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಮೊಯಿದ್ದಿನ್ ಬಾವಾ ಉಪಸ್ಥಿತರಿದ್ದರು.

adyar

adyar3

adyar4

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English