ನವದೆಹಲಿ : 2012ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು, ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.
ಮರಣದಂಡನೆ ಶಿಕ್ಷೆಯಿಂದ ವಿನಾಯ್ತಿ ನೀಡುವಂತೆ ಕೋರಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದಿಲ್ಲಿ ಸರ್ಕಾರ ಜನವರಿ 16ರಂದು ಮಧ್ಯಾಹ್ನ ಗೃಹ ಸಚಿವಾಲಯಕ್ಕೆ ಕಳುಹಿಸಿದ್ದು, ನಿನ್ನೆ ಸಂಜೆಯೇ ರಾಷ್ಟ್ರಪತಿಯವರಿಗೆ ರವಾನಿಸಲಾಗಿದೆ ಎಂದು ವರದಿ ವಿವರಿಸಿದೆ.
ಮಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸುವಂತೆ ದಿಲ್ಲಿ ಸರ್ಕಾರ ಜನವರಿ 15ರಂದು ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು.
ವರದಿಯ ಪ್ರಕಾರ, ಮುಕೇಶ್ ಕ್ಷಮಾದಾನ ಅರ್ಜಿಯನ್ನು ಮೊದಲು ದಿಲ್ಲಿ ಸರ್ಕಾರ ವಜಾಗೊಳಿಸಿ ನಂತರ ಲೆಫ್ಟಿನೆಂಟ್ ಗವರ್ನರ್ ಗೆ ಕಳುಹಿಸಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. ಲೆಫ್ಟಿನೆಂಟ್ ಗವರ್ನರ್ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿರುವುದಾಗಿ ತಿಳಿಸಿದೆ.
Click this button or press Ctrl+G to toggle between Kannada and English