ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

12:14 PM, Saturday, January 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

meyor

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್‌‌ನಿಂದ ವಾರ್ಡ್ ನಂ 26ರ ಸದಸ್ಯೆಯಾಗಿರುವ ತಸ್ಲಿಮ್ ಜೆಡಿಎಸ್ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಗೀತಾಶ್ರೀ ಯೋಗಾನಂದ್ ನಾಮಪತ್ರ ಸಲ್ಲಿಸಿದರು. ಶಾಂತಮ್ಮ ವಡಿವೇಲು ಉಪ ಮೇಯರ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪಾಲಿಕೆಯ ವಿರೋಧ ಪಕ್ಷದ ನಾಯಕ ಬಿ.ವಿ ಮಂಜುನಾಥ್ ಜೊತೆ ಸೇರಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಗಳು ಸಂಖ್ಯಾಬಲ ಇಲ್ಲದಿದ್ದರೂ ನಾಮಪತ್ರ ಸಲ್ಲಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English