- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಜ. 27 ರಂದು ಮಂಗಳೂರಿಗೆ

kendra-sachiva [1]

ಮಂಗಳೂರು : ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ.

ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಆಹ್ವಾನಿಸಿ ಸಮಾವೇಶ ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಪೈಕಿ ರಕ್ಷಣಾ ಸಚಿವರು ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದಲ್ಲಿ ಸಮರ್ಥನಾ ಸಮಾವೇಶವನ್ನು ಜ.19ರಂದು ಮಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿತ್ತು. ಆದರೆ, ಗೃಹ ಸಚಿವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಮಂಗಳೂರು ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು.