ಇಡ್ಯಾ ದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಮಂಡಲೋತ್ಸವ ಮತ್ತು ಪಿಲಿಚಾಮುಂಡಿ ದೈವದ ಧರ್ಮ ನೇಮೋತ್ಸವ

4:02 PM, Tuesday, January 21st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

idyaa

ಸುರತ್ಕಲ್ : ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 30 ರಿಂದ 9ರ ವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಾಮಂಡಲೋತ್ಸವ, ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ ಜರಗಲಿದೆ ಎಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿಯವರು ಹೇಳಿದರು.

ಫೆಬ್ರವರಿ 7ರಂದು ಶುಕ್ರವಾರ ಪೂರ್ವಾಹ್ನ 9.30ರಿಂದ 9.45ರ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ವಿದ್ಯಾಧರ ಮುನಿ ಪ್ರತಿಷ್ಠಾಪಿತ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅವರು ಹೇಳಿದರು.

idyaa

ರಾತ್ರಿ ವೇದಮೂರ್ತಿ ಸಗ್ರಿ ಶ್ರೀ ಗೋಪಾಲಕೃಷ್ಣ ಸಾಮಗ ಮದ್ದೂರು, ಶ್ರೀ ಕೃಷ್ಣಪ್ರಸಾದ ವೈದ್ಯ ಮತ್ತು ಬಳಗದವರಿಂದ ಅಷ್ಟಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಫೆಬ್ರವರಿ 9ರಂದು ಭಾನುವಾರ ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ ನಡೆಯಲಿದೆ ಎಂದು ಅವರು ಹೇಳಿದರು.

31 ಜನವರಿ 2020ರಿಂದ 9 ಫೆಬ್ರವರಿ 2020ರ ವರೆಗೆ ಪ್ರತಿದಿನ ಸಂಜೆ 6ಗಂಟೆಗೆ ಶ್ರೀ ಕ್ಷೇತ್ರ ಇಡ್ಯಾದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಲಿದ್ದು ತದನಂತರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

idyaa

ಪ್ರತಿದಿನ ಭಕ್ತಾದಿಗಳಿಗೆ ನಿರಂತರವಾಗಿ ಉಪಾಹಾರ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಸುಮಾರು ಒಂದು ಸಾವಿರ ವರ್ಷಕ್ಕೂ ಮಿಕ್ಕಿ ಇತಿಹಾಸ ಇರುವ ಸದ್ರಿ ದೇವಸ್ಥಾನದ ಹಿಂದಿನ ಜೀಣೋರ್ದ್ಧಾರ ಕಾರ್ಯ 1980ರ ಆಸುಪಾಸಿನಲ್ಲಿ ಜರಗಿದ್ದು, ತದನಂತರ ನವೀಕರಣದ ಕಾರ್ಯಗಳು ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ಹಿಂದೆ 1979ರಲ್ಲಿ 1982ರಲ್ಲಿ ಶ್ರೀ ಮಹಾಗಣಪತಿಯ ನೂತನ ಗರ್ಭಗುಡಿ ನಿರ್ಮಾಣ ಮತ್ತು ಪುನರ್ ಪ್ರತಿಷ್ಠೆ 1991 ಮತ್ತು 2004ರಲ್ಲಿ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶ ಹಾಗು ನಾಗಮಂಡಲ ಸೇವೆ ಜರುಗಿರುತ್ತದೆ. 2004ರಲ್ಲಿ ದೇವರ ದರ್ಶನ ಪಡೆದಿದ್ದರು. ಈ ಬಾರಿಯ ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮೋತ್ಸವದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

idyaa

ಸುಮಾರು ಒಂದು ಕೋಟಿ ವೆಚ್ಚದಲ್ಲಿ ಬ್ರಹ್ಮಕಲಶದ ವಿಧಿ ವಿಧಾನದಲ್ಲಿ ನಡೆಯಲಿದೆ. ಫೆಬ್ರವರಿ ಏಳರಂದು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲಿರುವರು ಎಂದು ಅವರು ಹೇಳಿದರು.

ಪ್ರಥಮ ಬಾರಿಗೆ ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ :
ಶ್ರೀ ಕ್ಷೇತ್ರ ಒಂಟಿ ದೈವ ಶ್ರೀ ಪಿಲಿಚಾಮುಂಡಿಗೆ ಪ್ರಪ್ರಥಮ ಬಾರಿಗೆ ಧರ್ಮ ನೇಮೋತ್ಸವದ ಜರಗುತ್ತಿದ್ದು ಇದೊಂದು ವಿಶೇಷ ಆಕರ್ಷಣೆಯಾಗಿದೆ.

ಸದ್ರಿ ದೇಗುಲವು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿಮಿತವಾಗದೆ ಎರಡು ದೊಡ್ಡ ವಿದ್ಯಾಸಂಸ್ಥೆಯ ಉಗಮ ಸ್ಥಾನವೂ ಹೌದು. 1916ರಲ್ಲಿ ಹಿಂದೂ ವಿದ್ಯಾದಾಯಿನಿ ಸಂಸ್ಥೆ ಇಲ್ಲಿಂದಲೇ ಪ್ರಾರಂಭವಾಗಿದ್ದರೆ, 1982ರಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ ಇಲ್ಲಿಯ ಪ್ರೇರಣೆಯಿಂದಲೇ ಪ್ರಾರಂಭ ಆಗಿರುತ್ತದೆ. ಅಂತೆಯೇ ವೇದಪಾಠ ಶಾಲೆ, ಯಾಗ, ಯಕ್ಷಗಾನ ತರಬೇತಿ ಕೇಂದ್ರ, ಯಕ್ಷಗಾನ ತಾಳಮದ್ದಳೆ, ಪ್ರವಚನ, ಮದ್ಯವರ್ಜನ ಶಿಬಿರ ಹಾಗೂ ಅನೇಕ ಸಂಘ-ಸಂಸ್ಥೆಗಳ ಸಮಾಜಮುಖಿ ಚಿಂತನೆಯ ಸಭೆ ನಡೆಸುವ ಉಚಿತ ಕೇಂದ್ರವೂ ಇದಾಗಿರುತ್ತದೆ.

idyaa

ಪತ್ರಿಗೋಷ್ಠಿಯಲ್ಲಿ ಹಾಜರಿದ್ದವರು ವೇದಮೂರ್ತಿ ಐ. ರಮಾನಂದ ಭಟ್, ಪ್ರಧಾನ ಅರ್ಚಕರು, ಅನುವಂಶಿಕ ಮೊಕ್ತೇಸರರು, ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ, ಸುರತ್ಕಲ್ ಮತ್ತು ಪ್ರಧಾನ ಕೋಶಾಧಿಕಾರಿ, ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷರು, ಜೀರ್ಣೋದ್ಧಾರ, ಬ್ರಹ್ಮಕಲಶ, ನಾಗಮಂಡಲ, ಧರ್ಮನೇಮೋತ್ಸವ ಸಮಿತಿ ಇಡ್ಯಾ, ಸತ್ಯಜಿತ್ ಸುರತ್ಕಲ್, ಅಗರಿ ರಾಘವೇಂದ್ರ ರಾವ್, ಸಂತೋಷ್ ಕುಮಾರ್ ಶೆಟ್ಟಿ, ಟಿ, ಎನ್. ರಮೇಶ್ ಕಾರ್ಯಾಧ್ಯಕ್ಷರು, ಕೃಷ್ಣ ಕುಮಾರ್ ಇಡ್ಯಾ ಪ್ರಧಾನ ಕಾರ್ಯದರ್ಶಿ, ಅಣ್ಣಪ್ಪ ದೇವಾಡಿಗ ಪ್ರಧಾನ ಸಂಚಾಲಕರು, ರಜನಿ ದುಗ್ಗಣ್ಣ ಮಾಜಿ ಮೇಯರ್, ಜಗನ್ನಾಥ ಶೆಟ್ಟಿ ಬಾಳ, ಮಹೇಶ್ ಮೂರ್ತಿ ಸುರತ್ಕಲ್, ಶಕುಂತಲಾ ಭಟ್ ಇವರೆಲ್ಲರೂ ಉಪಸ್ಥಿತರಿದ್ದರು.

idyaa

idya6

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English