ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ವ್ಯಕ್ತಿ ಆದಿತ್ಯರಾವ್ ಬೆಂಗಳೂರು ಪೊಲೀಸರಿಗೆ ಶರಣು

9:57 AM, Wednesday, January 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Accused-Adithya-Rao

ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಡುಪಿ ಮೂಲದ ಆದಿತ್ಯರಾವ್ ಎಂಬಾತ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರಿನ ನೃಪತುಂಗ ರಸ್ತೆ ಬಳಿ ಇರುವ ಡಿಜಿಐಜಿಪಿ ಕಚೇರಿಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಹುಸಿ‌ ಬಾಂಬ್ ಕರೆಯಿಂದ ಆದಿತ್ಯರಾವ್ ಅರೆಸ್ಟ್ ಆಗಿದ್ದ. ಇಂದು ಡಿಜಿ ಕಚೇರಿಗೆ ಬಂದು ಶರಣಾದ ಹಿನ್ನೆಲೆ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸ್ರು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರೆಸಲಿದ್ದಾರೆ.

ಎರಡು ದಿನಗಳ ಹಿಂದೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವ ಬ್ಯಾಗ್ ಪತ್ತೆಯಾಗಿತ್ತು. ನಂತ್ರ ಆರೋಪಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು‌. ಹೀಗಾಗಿ ಈತನೇ ಇಟ್ಟಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದ್ರೆ ಆರೋಪಿ ಇಂದು ಬೆಳಗ್ಗೆ 7 ಗಂಟೆಗೆ ಡಿಜಿ-ಐಜಿಪಿ ಮುಂದೆ ಶರಣಾಗಿ, ನಾನೇ ಬಾಂಬ್ ಇಟ್ಟಿದ್ದು ಎಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English