ಕಡಬ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾರಾಯಣ ಭಟ್ ಟಿ.

12:06 PM, Wednesday, January 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

narayanaT

ಕಡಬ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ ಆಶ್ರಯದಲ್ಲಿ ಫೆ. 28 ಹಾಗೂ 29ರಂದು ರಾಮ ಕುಂಜ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ನಾರಾಯಣ ಭಟ್ ಟಿ. ರಾಮ ಕುಂಜ ಆಯ್ಕೆಗೊಂಡಿದ್ದಾರೆ .

ಸಾಹಿತ್ಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿರುವ ಶ್ರೀಯುತರು ’ಜೀವನ ಶಿಕ್ಷಣ’ ’ಉತ್ತಮ ಶಾಲೆಗೊಂದು ಮಾರ್ಗದರ್ಶಿ’ ’ನಮ್ಮ ಮಕ್ಕಳು ಹೇಗಿರಬೇಕು’ ಸಹಿತ ಸುಮಾರು 25ಕೃತಿಗಳನ್ನು ರಚಿಸಿರುವರು, ಅನೇಕ ಕೃತಿಗಳು ಎಳೆಂಟು ಬಾರಿ ಮರು ಮುದ್ರಣಗೊಂಡಿವೆ.

ಇವರ ಸಾಧನೆಗಾಗಿ 1994ರಲ್ಲಿ ಜಿಲ್ಲಾ ಶಿಕ್ಷಕ ಪ್ರಶಸ್ತಿ 2005ರಲ್ಲಿ ರಾಜ್ಯ ಶಿಕ್ಷಕ ಪ್ರಶಸ್ತಿ ಹಾಗೂ 2009ರಲ್ಲಿ ರಾಷ್ಟ್ರ ಪ್ರಶಸ್ತಿಯೂ ಲಭಿಸಿದೆ.

ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದಿರುವ ನಾರಾಯಣ ಭಟ್ ಟಿ. ಅವರನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಿರುವ ವಿಷಯವನ್ನು ದಕ್ಷಿಣ ಕನ್ನಡಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹಾಗೂ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಘಟಕದ ಅಧ್ಯಕ್ಷ ಜನಾರ್ದನಗೌಡ ಪಣೆಮಜಲು ಜಂಟಿ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

 

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English