ವಿರಾಜಪೇಟೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

5:03 PM, Thursday, January 23rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

vraj

ಮಡಿಕೇರಿ : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಯುವ ಸ್ಪಂದನ ಘಟಕದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಯುವ ಸ್ಪಂದನ ಕಾರ್ಯಕರ್ತೆ ಜಯಂತಿ ಮಾತನಾಡಿ, ಯುವಜನರು ಅನುಭವಿಸುತ್ತಿರುವ ತೊಂದರೆ, ಮಾನಸಿಕ ತೊಳಲಾಟ, ಹದಿಹರೆಯದ ಸಮಸ್ಯೆಗಳ ಪರಿಹಾರಕ್ಕೆ ಉತ್ತಮ ಮಾರ್ಗದರ್ಶನ ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಟಿ.ಕೆ.ಬೋಪಯ್ಯ ಮಾತನಾಡಿ, ಯುವಜನರು ಹದಿಹರೆಯದ ವಯಸ್ಸಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಯುವ ಸ್ಪಂದನ ಸಹಕಾರಿಯಾಗಿದೆ.

ಪ್ರತಿಯೊಬ್ಬ ವ್ಯಕ್ತಿಯು ವ್ಯಕ್ತಿತ್ವ ವಿಕಸನ ಮಾಡಿಕೊಂಡು ತನ್ನನ್ನು ತಾನು ಗುರುತಿಸಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಎಂ.ಎನ್ ವನಿತ್ ಕುಮಾರ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಅಧ್ಯಾಪಕರಾದ ಪೊನ್ನಪ್ಪ ಮತ್ತು ಶಿವಣ್ಣ ಉಪಸ್ಥಿತರಿದ್ದರು. ಪ್ರೊ.ಎಂ.ಡಿ.ದಿವ್ಯ ಸ್ವಾಗತಿಸಿದರು. ವಿದ್ಯಾರ್ಥಿ ಮಂಜೇಶ್ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಜಾರೀಟಾ ನಿರ್ವಹಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English