ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಕೇಮಾರು ಶ್ರೀ ಒತ್ತಾಯ

1:05 PM, Tuesday, November 6th, 2012
Share
1 Star2 Stars3 Stars4 Stars5 Stars
(5 rating, 1 votes)
Loading...

Soujanya murder caseಬೆಳ್ತಂಗಡಿ :ಸೌಜನ್ಯಳ ಮನೆಗೆ ಭೇಟಿ ನೀಡಿದ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿಯವರು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಆದ್ದರಿಂದ ಈ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಇನ್ನು15 ದಿನಗಳಲ್ಲಿ ಸೂಕ್ತ ತನಿಖೆ ನಡೆಸದೇ ಇದ್ದಲ್ಲಿ ಸಾರ್ವಜನಿಕರ ಬೆಂಬಲದೊಂದಿಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದವರು ತಿಳಿಸಿದರು.

ಪ್ರಕರಣದ ಹಿಂದೆ ಯಾರೇ ಇದ್ದರು ಅದನ್ನು ಕೂಡಲೇ ಪತ್ತೆಹಚ್ಚಿ ಬಹಿರಂಗಪಡಿಸಬೇಕು, ಹಾಗೂ ಸಾರ್ವಜನಿಕರ ಹಿತಾಸಕ್ತಿ ಮೇರೆಗೆ ಹೈಕೋರ್ಟ್ ಮೆಟ್ಟಿಲೇರುವುದಾಗಿ ಸ್ವಾಮೀಜಿ ತಿಳಿಸಿದರು. ಅಲ್ಲದೆ ಈ ಪರಿಸರದಲ್ಲಿ 57 ಅಸಹಜ ಸಾವುಗಳ ಬಗ್ಗೆ ವರದಿಯಾಗಿದ್ದು, ಈ ಕುರಿತು ಕೂಡಾ ತನಿಖೆ ನಡೆಸಬೇಕು ಎಂದು ತಿಳಿಸಿದರು. ಈ ಸಂದರ್ಭ ವಿವಿಧ ಸಂಘಟನೆಗಳ ನೂರಾರು ಮಂದಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English