ನಾವೆಲ್ಲರೂ ಭಾರತೀಯರಾಗಿ ಬದುಕಬೇಕು : ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಕರೆ

10:34 AM, Wednesday, January 29th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

karyappa

ಮಡಿಕೇರಿ : ಜಾತಿ, ಧರ್ಮ, ಪಂಗಡಗಳಿಗಿಂತ ನಾವೆಲ್ಲರೂ ಭಾರತೀಯರಾಗಿ ಬದುಕಬೇಕು ಎಂದು ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲಾಡಳಿತ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಂಗಳವಾರ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ೧೨೧ ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಡೀ ವಿಶ್ವದಲ್ಲಿ ಭಾರತ ಅತ್ಯುತ್ತಮ ರಾಷ್ಟ್ರವಾಗಿದ್ದು, ದೇಶಕ್ಕೆ ಗೌರವ ನೀಡಬೇಕಿದೆ. ಭಾರತ ಮೊದಲು ನಂತರ ಉಳಿದವು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

karyappa

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು, ನನ್ನ ಶಾಲಾ ದಿನಗಳಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾಷಣಗಳನ್ನು ಹಲವು ಬಾರಿ ಕೇಳಿದ್ದೇನೆ. ಅವರು ಎಂದಿಗೂ ದೇಶವೇ ಮೊದಲು ಎಂಬ ಭಾವನೆಯನ್ನು ಉಳ್ಳವರಾಗಿದ್ದರು. ವ್ಯಕ್ತಿಗೆ ಕರ್ತವ್ಯ ಪ್ರಜ್ಞೆ, ಸಮಯ ಪ್ರಜ್ಞೆ, ಶಿಸ್ತು ಮತ್ತು ಪ್ರಾಮಾಣಿಕತೆ ಇರಬೇಕು. ಕಾರ್ಯಪ್ಪ ಅವರು ದೇಶಪ್ರೇಮ ಮತ್ತು ದೇಶಭಕ್ತಿಗೆ ಹೆಸರಾದವರು ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಸೇನೆಯ ಮೊದಲ ಮಹಾನ್ ದಂಡ ನಾಯಕರಾದವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜಯಂತಿಯನ್ನು ರಾಷ್ಟ್ರೀಯ ಜಯಂತಿಗಳಲ್ಲಿ ಸೇರಿಸಬೇಕೆಂದು ಮುಖ್ಯಮಂತ್ರಿಯವರಲ್ಲಿ ಈಗಾಗಲೇ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳುನ್ನು ತಿಳಿದುಕೊಳ್ಳುವಂತಾಗಬೇಕು. ಜೊತೆಗೆ ಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಶಾಸಕರು ಹೇಳಿದರು.

ಜಿಲ್ಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಕೊಡಗು ಜಿಲ್ಲೆ ಪ್ರವಾಸಿ ತಾಣ ಮತ್ತು ನೈಸರ್ಗಿಕ ಸಂಪತ್ತಿನಿಂದ ಮಾತ್ರವಲ್ಲದೇ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿನಿಂದ ಮತ್ತು ಅವರ ದೇಶ ಸೇವೆಯಿಂದ ಮತ್ತಷ್ಟು ಖ್ಯಾತಿ ಗಳಿಸಿದೆ ಎಂದರು. ಜಿಲ್ಲಾಧಿಕಾರಿಯಾಗಿ ಕಾರ್ಯಪ್ಪನವರ ಊರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಹೆಮ್ಮೆ ಇದೆ ಎಂದರು.

karyappa

ಕಾರ್ಯಕ್ರಮದಲ್ಲಿ ಹಲವು ಗಣ್ಯರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಸಮಾರಂಭದಲ್ಲಿ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷರಾದ ನಿವೃತ್ತ ಕರ್ನಲ್ ಕೆ.ಸಿ.ಸುಬ್ಬಯ್ಯ, ಸಂಚಾಲಕರಾದ ಮೇಜರ್ ಬಿ.ಎ.ನಂಜಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಪೌರಾಯುಕ್ತರಾದ ರಮೇಶ್, ತಹಶೀಲ್ದಾರ್ ಮಹೇಶ್, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಜರಿದ್ದರು.

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಗೀತೆ, ನಾಡಗೀತೆ ಹಾಡಿದರು, ವಂದೇ ಮಾತರಂ ಗೀತೆ ಹಾಡಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಸ್ವಾಗತಿಸಿದರು. ರಿಜಿಸ್ಟ್ರಾರ್ ಎ.ಸಿ.ಗಿರೀಶ್ ವಂದಿಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯ ವಿಜೇತರ ವಿವರ ಇಂತಿವೆ.

ಪ್ರಬಂಧ ಸ್ಪರ್ಧೆಯಲ್ಲಿ ಕಳತ್‌ಮಾಡು ಲಯನ್ಸ್ ಪ್ರೌಢ ಶಾಲೆಯ ಕಾಂಚನ್ ಕಮಲಾಕ್ಷಿ ಸಿ.ಕೆ.(ಪ್ರಥಮ), ನಾಪೋಕ್ಲು ಶ್ರೀ ರಾಮಟ್ರಸ್ಟ್ ಆಂಗ್ಲ ಮಾದ್ಯಮ ಶಾಲೆಯ ದೀಪ್ನ ದೇವಯ್ಯ ಎ.(ದ್ವಿತೀಯ), ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಕೃತಿಕ ಬಿಕ್.(ತೃತೀಯ) ಸ್ಥಾನ ಪಡೆದುಕೊಂಡರು.

ಸಮಾದಾನಕರ ಬಹುಮಾನವನ್ನು ವಿರಾಜಪೇಟೆ ಸಂತ ಅನ್ನಮ ಶಾಲೆಯ ರೋಶನ ಜಿ.ಸಿ, ಕಳತ್‌ಮಾಡು ಲಯನ್ಸ್ ಪ್ರೌಢ ಶಾಲೆಯ ಪೊನ್ನಮ್ಮ ಕೆ.ಎಂ, ಮೂರ್ನಾಡು ಜನನ ಜ್ಯೋತಿ ಶಿಕ್ಷಣ ಸಂಸ್ಥೆಯ ವರ್ಷಿನಿ ಚಂಗಪ್ಪ ಸಿ.ಸಿ. ಅವರು ಪಡೆದುಕೊಂಡರು

ಚಿತ್ರಕಲೆಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಶ್ರೇಯ ಮರಿಯಾ ಆಂಟೋನಿ(ಪ್ರಥಮ), ನಾಪೋಕ್ಲು ಶ್ರೀ ರಾಮಟ್ರಸ್ಟ್ ಆಂಗ್ಲ ಮಾದ್ಯಮ ಶಾಲೆಯ ಸಿ. ತಾನ್ಯ ಅಯ್ಯಪ್ಪ(ದ್ವಿತೀಯ), ಮಡಿಕೇರಿಯ ಜಿ.ಎಂ.ಪಿ ಪ್ರೌಢಶಾಲೆಯ ವಿನಯ್ ಎನ್(ತೃತೀಯ) ಸ್ಥಾನ ಪಡೆದುಕೊಂಡರು.

ಸಮಾದಾನಕರ ಬಹುಮಾನವನ್ನು ವಿರಾಜಪೇಟೆ ತ್ರಿವೇಣಿ ಶಾಲೆಯ ಸಿ.ಪಿ.ತುಶ್ಯಂತ್, ಚೇರಂಬಾಣೆ ಶ್ರೀ ರಾಜೇಶ್ವರಿ ಪ್ರೌಢಶಾಲೆಯ ಕುಶನ್ ಎ.ಎಲ್ ಅವರು ಪಡೆದುಕೊಂಡರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English