ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆ

1:34 PM, Wednesday, January 29th, 2020
Share
1 Star2 Stars3 Stars4 Stars5 Stars
(No Ratings Yet)
Loading...

saina

ನವದೆಹಲಿ : ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಕಠಿಣ ಪರಿಶ್ರಮ ಪಡುವ ವ್ಯಕ್ತಿ. ಹೀಗಾಗಿ ಇವರ ಜೊತೆ ಸೇರಿಕೊಂಡು ದೇಶಕ್ಕಾಗಿ ಕೆಲಸ ಮಾಡಬೇಕೆಂಬ ಆಸೆಯಿದೆ ಎಂದು ಹೇಳಿದರು.

ಹರ್ಯಾಣ ಮೂಲದ ಸೈನಾ ನೆಹ್ವಾಲ್ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ. ದೆಹಲಿ ಚುನಾವಣೆ ಫೆ.9 ರಂದು ನಡೆಯಲಿದೆ.

ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಸೈನಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2016 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗಿತ್ತು.

ಒಟ್ಟು 24 ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English