ಬೆಂಗಳೂರು : ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ. ಬುಧವಾರ ನಡುರಾತ್ರಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರೆಲ್ಲರೂ ಆತುರಾತುರವಾಗಿ ಕೆಳಗೆ ಇಳಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ.
34 ಜನರು ಪ್ರಯಾಣಿಸುತ್ತಿದ್ದ ಎಂಎಸ್ಎಸ್ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಕೊಯಮತ್ತೂರಿಗೆ ಹೊರಟಿತ್ತು. ಬುಧವಾರ ರಾತ್ರಿ 11 ಗಂಟೆಗೆ ಮಡಿವಾಳದ ಭಾರತ್ ಪೆಟ್ರೋಲ್ ಬಂಕ್ಗೆ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಚಾಲಕ ಬಸ್ ಸ್ಟಾರ್ಟ್ ಮಾಡುತ್ತಿದ್ದಂತೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಸ್ ಚಾಲಕ ಎಲ್ಲ ಪ್ರಯಾಣಿಕರಿಗೂ ಇಳಿಯುವಂತೆ ಸೂಚನೆ ನೀಡಿದ್ದಾರೆ.
ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಬಸ್ನಲ್ಲಿದ್ದ ಎಲ್ಲರೂ ಆತುರಾತುರವಾಗಿ ಬಸ್ನಿಂದ ಕೆಳಗೆ ಇಳಿದಿದ್ದಾರೆ. ಬಸ್ನಲ್ಲಿ ಒಟ್ಟು 34 ಪ್ರಯಾಣಿಕರಿದ್ದರು.ಪ್ರಯಾಣಿಕರೆಲ್ಲರೂ ಬಸ್ನಿಂದ ಇಳಿಯುತ್ತಿದ್ದಂತೆ ಬಸ್ ಜೋರಾಗಿ ಹೊತ್ತಿ ಉರಿದಿದೆ. ಭಾರತ್ ಪೆಟ್ರೋಲ್ ಬಂಕ್ ಒಳಗೇ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Click this button or press Ctrl+G to toggle between Kannada and English