ಮುಂದಿನ ಶೈಕ್ಷಣಿಕ ಸಾಲಿನಿಂದ ನೀಟ್ ಮಾದರಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ : ಡಾ.ಸಿ.ಎನ್.ಅಶ್ವತ್ಥನಾರಾಯಣ

1:03 PM, Thursday, January 30th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ashwath-Narayan

ಬೆಂಗಳೂರು : ಕೆಇಎ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ನೀಟ್ ಮಾದರಿಯಲ್ಲಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಉನ್ನತ ಶಿಕ್ಷಣ ಪರಿಷತ್ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸಿಇಟಿ ಪರೀಕ್ಷೆಯನ್ನು 2 ದಿನ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನಿಂದ ಸಿಇಟಿ ಪರೀಕ್ಷೆಯನ್ನು ನೀಟ್ ಮಾದರಿ ನಡೆಸಲಿದ್ದೇವೆ.

ಬೆಳಗ್ಗೆ ಮತ್ತು ಮಧ್ಯಾಹ್ನ ಒಂದೇ ದಿನ ಪರೀಕ್ಷೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಪರೀಕ್ಷಾ ಮಾದರಿಯನ್ನು ಬದಲಿಸಲು ತೀರ್ವನಿಸಲಾಗಿದೆ. ಗಡಿನಾಡು ಮತ್ತು ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಹಿಂದಿನಂತೆ ಇರಲಿದೆ. ಸಿಇಟಿ ಪರೀಕ್ಷೆಯ ದುಬಾರಿ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದೇವೆ. ಕೃಷಿ ವಿಜ್ಞಾನ, ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಕೆಇಎ ನಡೆಸುವ ಸಿಇಟಿಯು ರಾಜ್ಯದ ಅತಿದೊಡ್ಡ ಪ್ರವೇಶ ಪರೀಕ್ಷೆಯಾಗಿದೆ ಎಂದು ವಿವರಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English