ದಾವಣಗೆರೆ : ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕಾಗಿ ನಿಮಗೆ ಮಸೀದಿ ಬೇಕೆ ಎಂದಿದ್ದರು. ಇವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದರು.
ದೂರು ಬಂದ ಹಿನ್ನೆಲೆ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 A, 295 A ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ರೇಣುಕಾಚಾರ್ಯ ಈ ಹೇಳಿಕೆ ಖಂಡಿಸಿ ಮುಸ್ಲಿಂ ಸಮುದಾಯಸ್ಥರು ಪ್ರತಿಭಟನೆಯನ್ನು ನಡೆಸಿದ್ದರು.
ಇಷ್ಟೇ ಅಲ್ಲದೇ ಯಾರು ಪೌರತ್ವ ಕಾಯ್ದೆ ವಿರೋಧಿಸುತ್ತಾರೋ ಅವರು ದೇಶದ್ರೋಹಿಗಳು. ಅವರು ಕಾಂಗ್ರೆಸ್ ಇರಬಹುದು, ಜೆಡಿಎಸ್ ಇರಬಹುದು. ಯಾರೇ ಆಗಲಿ ಸಿಎಎಗೆ ವಿರೋಧ ವ್ಯಕ್ತಪಡಿಸುವವರು ದೇಶದ್ರೋಹಿಗಳೇ ಎಂದು ಕೂಡ ಟೀಕಿಸಿದ್ದರು.
Click this button or press Ctrl+G to toggle between Kannada and English