ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ೭೨ನೇ ಸಂಸ್ಮರಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧಿ ಅವರ ಆದರ್ಶಗಳ ಕುರಿತು ಮಾತನಾಡಿದರು.
ಡಿಸಿಸಿ ಉಪಾಧ್ಯಕ್ಷ ಎಂ.ಎಸ್.ಪೂವಯ್ಯ, ಖಜಾಂಚಿ ಹೆಚ್.ಎಂ.ನಂದಕುಮಾರ್, ಸದಸ್ಯರಾದ ಗೀತಾ ಧರ್ಮಪ್ಪ, ಎಂ.ಇ.ಹನೀಫ್, ಜಿ.ಪಂ ಸದಸ್ಯೆ ಕುಮುದಾ ಧರ್ಮಪ್ಪ, ಯುವ ಕಾಂಗ್ರೆಸ್‌ನ ನಗರಾಧ್ಯಕ್ಷ ಸದಾ ಮುದ್ದಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ಮಹಿಳಾ ಘಟಕದ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿದೇವಯ್ಯ, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಫರ್ಜಾನ, ನಗರಸಭೆ ಮಾಜಿ ಸದಸ್ಯರಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ಪರಿಶಿಷ್ಟ ಘಟಕದ ನಗರಾಧ್ಯಕ್ಷ ಮುದ್ದುರಾಜ್, ಪ್ರಮುಖರಾದ ಸುನೀಲ್ ನಂಜಪ್ಪ, ಪುಷ್ಪಾಪೂಣಚ್ಚ, ಕಾನೆಹಿತ್ಲು ಮೊಣ್ಣಪ್ಪ, ಉದಯ್‌ಕುಮಾರ್, ಕೆ.ಎ.ಆನಂದ್, ಹಯಾತ್, ಕಲೀಲ್ ಬಾಷಾ, ಸ್ಪರ್ಣಲತಾ, ಪೂರ್ಣಿಮ, ಕಚೇರಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಸ್ವಾಗತಿಸಿ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್ ವಂದಿಸಿದರು.
Click this button or press Ctrl+G to toggle between Kannada and English