- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕಾರ

vinay-sharma [1]

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಬೆಳಿಗ್ಗೆ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು.

ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಶನಿವಾರ ಮುಂಜಾನೆ ಗಲ್ಲು ಶಿಕ್ಷೆ ನೀಡುವ ಬಗ್ಗೆ ಡೆತ್ ವಾರಂಟ್ ಹೊರಡಿಸಲಾಗಿತ್ತು. ಆದರೆ ಪಾಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಸಂಜೆ ತಡೆಯಾಜ್ಷೆ ನೀಡಿತ್ತು.

2012ರ ಡಿಸೆಂಬರ್ 16ರಂದು ದೆಹಲಿಯ ವೈದ್ಯಕೀಯ ವಿದ್ಯಾರ್ಥಿನಿಯನ್ನು ನಾಲ್ವರು ಚಲಿಸುತ್ತಿದ್ದ ಬಸ್ ನಲ್ಲಿ ಅತ್ಯಾಚಾರ ಮಾಡಿದ್ದರು.