- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೇಂದ್ರದ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ.; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ : ನಿರ್ಮಲಾ ಸೀತಾರಾಮನ್

nirmala-sitaraman [1]

ನವದೆಹಲಿ : ಬಜೆಟ್ ಮಂಡನೆಯ ಆರಂಭದಲ್ಲೇ ಯುವಜನರ ಉದ್ಯೋಗ, ಮಹಿಳೆಯರ ಸಬಲೀಕರಣ, ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಘೋಷಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ರೂ. ಮೀಸಲಿಟ್ಟಿದ್ದಾರೆ.

ಈ ಬಾರಿಯ ಕೇಂದ್ರದ ಬಜೆಟ್ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ. ಮೀಸಲಿಡಲಾಗಿದೆ. ಗರ್ಭಿಣಿಯರ ಸಾವನ್ನು ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹೊಸ ಟಾಸ್ಕ್ಫೋರ್ಸ್ ರಚಿಸಲಾಗುವುದು. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಬಜೆಟ್ನಲ್ಲಿ ವಿತ್ತ ಸಚಿವೆ ತಿಳಿಸಿದ್ದಾರೆ.

‘ಬೇಟಿ ಬಚಾವೋ’ ಯೋಜನೆ ಯಶಸ್ವಿಯಾಗಿದ್ದು, ದೇಶದಲ್ಲಿ ಹೆಣ್ಣುಮಕ್ಕಳ ಕಲಿಕೆಯ ಪ್ರಮಾಣ ಹೆಚ್ಚಳವಾಗಿದೆ. ಶಾಲೆಗಳಲ್ಲಿ ಹೆಣ್ಣುಮಕ್ಕಳ ನೋಂದಣಿ ಸಂಖ್ಯೆಯೂ ಹೆಚ್ಚಳವಾಗಿದೆ. ಹುಡುಗರಿಗಿಂತ ಹೆಣ್ಣುಮಕ್ಕಳ ನೋಂದಣಿಯಲ್ಲಿ ಏರಿಕೆಯಾಗಿದೆ. ಉನ್ನತ ವ್ಯಾಸಂಗದಲ್ಲೂ ಹೆಣ್ಣುಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

6 ಲಕ್ಷ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರಕ್ಕಾಗಿ 35,300 ಕೋಟಿ ರೂ. ಮೀಸಲಿಡಲಾಗಿದೆ. ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ಮೀಸಲಿಡಲಾಗಿದೆ. ಎಸ್ಸಿ-ಎಸ್ಟಿ ಕಲ್ಯಾಣಕ್ಕಾಗಿ 85 ಸಾವಿರ ಕೋಟಿ ರೂ., ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗಾಗಿ 85 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವೆ ಬಜೆಟ್ನಲ್ಲಿ ಮಂಡಿಸಿದ್ದಾರೆ.