ಮಂಗಳೂರು : ನಗರದ ನೀರುಮಾರ್ಗದಲ್ಲಿರುವ ಪ್ರತಿಷ್ಠಿತ ಕರಾವಳಿ ಕಾಲೇಜಿನ ಪಾಲಿಟೆಕ್ನಿಕ್ ಡಿಪ್ಲೋಮಾ ಇನ್ ಅರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಯೂಸುಫ್ ಹಫೀಝ್ ಇವರು ಬೆಂಗಳೂರಿನ ರಾಜಾಜಿ ನಗರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ 3ನೇ ವಿಫಾ ಕಪ್ ಟ್ವೆಕಾಂಡೋ ಚಾಂಪಿಯನ್ಶಿಪ್ನ 47 ಕೆ.ಜಿ ಜ್ಯೂನಿಯರ್ ವಿಭಾಗದ ಕ್ಯೋರೋಗಿ ವಿಭಾಗದಲ್ಲಿ ಚಿನ್ನ ಮತ್ತು ಪೂಮ್ಸೆ ವಿಭಾಗದಲ್ಲಿ ಬೆಳ್ಳಿಯ ಪದಕ ಹಾಗೂ ಮಲ್ಲೇಶ್ವರಂನಲ್ಲಿ ನಡೆದ ರಾಜ್ಯ ಮಟ್ಟದ ಸೌತ್ ಝೋನ್ ಟ್ವೆಕಾಂಡೋ ಚಾಂಪಿಯನ್ಶಿಪ್ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿರುತ್ತಾರೆ.
ಹಾಗೂ ಬಂಟ್ವಾಳದ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಥಮ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟ್ವೆಕಾಂಡೋ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಎರಡು ಚಿನ್ನದ ಪದಕಗಳನ್ನು ಗಳಿಸುವುದರೊಂದಿಗೆ ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.
Click this button or press Ctrl+G to toggle between Kannada and English