ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

10:14 AM, Monday, February 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

dharmastala

ಉಜಿರೆ : ಆರುನೂರು ಮಂದಿ ಸಕ್ರಿಯ ಸ್ವಯಂ ಸೇವಕರತಂಡ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆಯಲ್ಲಿ ಕಳೆದ ಜನವರಿ 21ರಂದುಉಜಿರೆಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡಿತ್ತು.

dharmastala

ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆ ಪೀಡಿತರಿಗೆ ಸಂಕಷ್ಟದ ಸಂದರ್ಭಅಭಯಹಸ್ತ ನೀಡಿ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ.

dharmastala

ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ ಜೀವನದಿ ನೇತ್ರಾವತಿಯ ಸ್ವಚ್ಛತಾಕಾರ್ಯವನ್ನು 500ಮಂದಿ ಸ್ವಯಂ ಸೇವಕರತಂಡದವರು ಪ್ರಥಮ ಸೇವೆಯಾಗಿ ಮಾಡಿದರು.

dharmastala

ಬೆಳಿಗ್ಯೆ ಗಂಟೆ ಹತ್ತರಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತೆ ನಡೆಸಿ 6 ಲೋಡ್ ಬಟ್ಟೆತ್ಯಾಜ್ಯ, 2ಲೋಡ್‌ಕಟ್ಟಿಗೆ ಹಾಗೂ8 ಲೋಡ್‌ತ್ಯಾಜ್ಯ ತೆರವುಗೊಳಿಸಲಾಯಿತು.

dharmastala

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ ಭೇಟಿ ನೀಡಿ ಸೇವಾ ಕಾರ್ಯದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.

dharmastala

ಉಜಿರೆಯ ಹಿರಿಯ ಸಮಾಜ ಸೇವಾಕರ್ತರಾಮಚಂದ್ರ ಶೆಟ್ಟಿ ಸ್ವಚ್ಛತಾಕಾರ್ಯ ಉದ್ಘಾಟಿಸಿದರು.

dharmastala

ಶರತ್‌ಕೃಷ್ಣ ಪಡ್ವೆಟ್ನಾಯ, ಅನ್ನಪೂರ್ಣಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ಉಜಿರೆಯಉದ್ಯಮಿರಾಜೇಶ್ ಪೈ ಹಾಗೂ ಮೋಹನ ಕುಮಾರ್ ನೇತೃತ್ವದಲ್ಲಿ ಸ್ವಚ್ಛತಾ ಸೇವೆ ನಡೆಯಿತು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English