ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದ ಮಾಜಿ ಸಂಸದ ಆರ್.ಧೃವ ನಾರಾಯಣ

11:09 AM, Monday, February 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

druva-narayan

ಮೈಸೂರು : ಮೈತ್ರಿ ಸರ್ಕಾರದ ಪತನದ ಕುರಿತು ಪುಸ್ತಕ ಬರೆಯುವ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಆರ್.ಧೃವ ನಾರಾಯಣ ನಾನು ಈಗಾಗಲೇ ಹೇಳಿದ್ದೇನೆ ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದರು.

ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ವಿಶ್ವನಾಥ್ ಅವರಿಗೆ ಯಾವುದೇ ನೈತಿಕತೆಯಿಲ್ಲ. ಇದೊಂದು ಬ್ಲಾಕ್ ಮೇಲ್ ಮಾಡುವ ತಂತ್ರ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿತ್ತು. ಸಚಿವರನ್ನಾಗಿಯೂ ಕೂಡ ಮಾಡಿದ್ದರು.

ಕಾಂಗ್ರೇಸ್ ಪಕ್ಷಕ್ಕೆ ದ್ರೋಹ ಮಾಡಿ ಜೆಡಿಎಸ್ ಗೆ ಹೋಗಿದ್ದರು. ಜೆಡಿಎಸ್ ಪಕ್ಷ ಕೂಡ ಶಾಸಕರಾಗಿ ಮಾಡಿ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಅವರಿಗೂ ಕೂಡ ಮೋಸ ಮಾಡಿ ಬಿಜೆಪಿಗೆ ಹೋದರು. ಈಗ ಬಿಜೆಪಿಯಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ.

ಬಿಜೆಪಿಯವರಿಗೂ ಯಾವುದೇ ಸಿದ್ದಾಂತಗಳಿಲ್ಲ. ಯಡಿಯೂರಪ್ಪನವರಿಗೆ ಉತ್ತಮ ಆಡಳಿತ ನೀಡಲು ಸುವರ್ಣ ಅವಕಾಶವಿದೆ. ಆದರೆ ಬಿಜೆಪಿ ಹೈಕಮಾಂಡ್ ಅದಕ್ಕೆ ಅವಕಾಶ ನೀಡುತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲು ಕೂಡ ಅವರಿಗೆ ಸ್ವಾತಂತ್ರ ನೀಡುತ್ತಿಲ್ಲ ಎಂದರು.

ಇಂದು ಕೇಂದ್ರದ ಬಜೆಟ್ ಮಂಡನೆ ವಿಚಾರಕ್ಕೆ ಪ್ರತಿಕ್ರಿಯಿಸಿ ಉತ್ತಮ ಬಜೆಟ್ ನಿರೀಕ್ಷೆ ಮಾಡಿದ್ದೇವೆ. ಅಭಿವೃದ್ದಿ ಪರ ಬಜೆಟ್ ಮಂಡನೆ ಮಾಡಲು ಬಿಜೆಪಿಗೆ ಸುವರ್ಣ ಅವಕಾಶ. ಅವರಿಗೆ ಸಂಪೂರ್ಣ ಬಹುಮತ ಸಿಕ್ಕಿದೆ. ಈ ಹಿಂದೆ ನೋಟು ಬ್ಯಾನ್ ನಿಂದ ಜಿಡಿಪಿ ಕುಸಿದಿದೆ. 6.5 ಇದ್ದ ಜಿಡಿಪಿ, 4.5ಕ್ಕೆ ಕುಸಿದಿದೆ. ಸಿಎಎ, ಎನ್ ಆರ್ ಸಿ ಯಂತಹ ಕಾಯ್ದೆ ಜಾರಿಗೆ ತಂದು ಗೊಂದಲ ಸೃಷ್ಟಿಸಿದ್ದಾರೆ. ಈ ಬಾರಿ ಅಭಿವೃದ್ಧಿ ಪರ ಬಜೆಟ್ ಅನ್ನು ನಿರೀಕ್ಷೆ ಮಾಡುತ್ತಿದ್ದೇವೆ ಎಂದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English