ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ನ ಎರಡನೇ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕಾಸರಗೋಡಿನ ಕಾಂಞಗಾಡ್ ನಲ್ಲಿ ಮೂರನೇ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಸೋಮವಾರ ಖಚಿತಪಡಿಸಿದ್ದಾರೆ.
ಮೂರನೇ ವ್ಯಕ್ತಿ ಕೂಡಾ ಇತ್ತೀಚೆಗೆ ಕೊರೊನಾ ವೈರಸ್ ತವರಾದ ಚೀನಾದಿಂದ ತಾಯ್ನಾಡಿಗೆ ಮರಳಿದ್ದು, ಈಗಾಗಲೇ ಚೀನಾದಿಂದ ಕೇರಳಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು.
ಪ್ರಸ್ತುತ ರೋಗಿಗೆ ಕಾಸರಗೋಡಿನ ಕಾಂಞಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಈತ ಇತ್ತೀಚೆಗಷ್ಟೇ ಚೀನಾದ ವುಹಾನ್ ನಿಂದ ಕಾಸರಗೋಡಿಗೆ ಬಂದಿರುವುದಾಗಿ ವರದಿ ವಿವರಿಸಿದೆ.
Click this button or press Ctrl+G to toggle between Kannada and English