ಧರ್ಮಸ್ಥಳ : ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ

9:32 AM, Wednesday, February 5th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

ujire

ಉಜಿರೆ : ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಬೆಳಿಗ್ಯೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.

ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸಾಮೀಜಿ ಮಾತನಾಡಿ, ಎಲ್ಲೆಲ್ಲೂಅನ್ಯಾಯ, ಕ್ರೋಧ, ದ್ವೇಷ, ವಂಚನೆ ತಾಂಡವವಾಡುತ್ತಿರುವ ಇಂದು ಬಾಹುಬಲಿಯ ತ್ಯಾಗ ಸಂದೇಶ ವಿಶ್ವಮಾನ್ಯವಾಗಿದೆಎಂದು ಹೇಳಿದರು.

ಭಾರತ ದೇಶವು ಧರ್ಮ, ಸಂಸ್ಕೃತಿಯ ನೆಲೆವೀಡಾಗಿದ್ದು ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆಗೊಂಡ ಭಗವಾನ್ ಬಾಹುಬಲಿ ಮೂರ್ತಿಯ ಆರಾಧನೆಯಿಂದ ತ್ಯಾಗ, ಅಹಿಂಸೆ, ಸಂಯಮ, ಇಂದ್ರಿಯ ನಿಗ್ರಹ ಮೊದಲಾದ ಮಾನವೀಯ ಗುಣಗಳು ಉದ್ದೀಪನಗೊಂಡು, ಪರಸ್ಪರ ಪ್ರೀತಿ-ವಿಶ್ವಾಸದಿಂದ ಶಾಂತಿ, ಸಾಮರಸ್ಯ ಮೂಡಿ ಬರುತ್ತದೆ.

ujire

ಆರಾಧನೆ ಮೂಲಕ ನಾವು ಭಗವಂತನಲ್ಲಿರುವ ಅಮೂಲ್ಯ ಹಾಗೂ ಅನಂತ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಆದುದರಿಂದಲೇ ನಾವು ವಂದೇ ತದ್ಗುಣ ಲಬ್ದಯೇ ಅಂದರೆ ದೇವರಲ್ಲಿರುವ ಅನಂತ ಗುಣಗಳು ನಮ್ಮಲ್ಲಿಯೂ ಮೂಡಿ ಬರಲಿ ಎಂದು ಪ್ರಾರ್ಥಿಸುತ್ತೇವೆ. ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯದ ಮೂಲಕ ವಿಶ್ವಶಾಂತಿಉಂಟಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಕ್ಷುಲ್ಲಕಧ್ಯಾನ ಸಾಗರ್ ಮಹಾರಾಜ್ ಆಶೀರ್ವಚನ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್, ಡಾ.ಬಿ. ಯಶೋವರ್ಮ, ಸೋನಿಯಾವರ್ಮ ಹಾಗೂ ಕುಟುಂಬಸ್ಥರುಪಾದಾಭಿಷೇಕ ಮಾಡಿದರು.

ಪಂಚನಮಸ್ಕಾರ ಮಂತ್ರ ಪಠಣ, ಜಿನ ಭಜನೆ ಹಾಗೂ ಭಕ್ತಿಗೀತೆಗಳ ಗಾಯನ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರಜೈನ್ ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English