ಚೆನ್ನೈ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ. ಒಂದು ವೇಳೆ ಇದರಿಂದ ಮುಸ್ಲಿಮರಿಗೆ ತೊಂದರೆ ಆದರೆ ಇದರ ಬಗ್ಗೆ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರ ಮಾತನಾಡಿರುವ ರಜನಿಕಾಂತ್, ಇದು ಅಗತ್ಯವಾಗಿದೆ. ಹೊರಗಿನವರನ್ನು ಗುರುತಿಸಲು ಎನ್ ಪಿಆರ್ ಅಗತ್ಯವಿದೆ. ಅಲ್ಲದೇ ಎನ್ ಆರ್ ಸಿ ಜಾರಿ ಬಗ್ಗೆ ಇನ್ನೂ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ವಿವಿಧೆಡೆ ನಡೆದ ಪ್ರತಿಭಟನೆ, ಹಿಂಸಾಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದ ಅವರು, ಯಾವುದೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲು ಹಿಂಸಾಚಾರ ಮಾರ್ಗವಲ್ಲ ಎಂದು ತಿಳಿಸಿದ್ದರು
Click this button or press Ctrl+G to toggle between Kannada and English