ಮಂಗಳೂರು : ಮಂಗಳೂರು ನಗರದ ವಿಶ್ವವಿದ್ಯಾಲಯ ಕಾಲೇಜು 150ನೇ ವರ್ಷದ ಸಂಭ್ರಮಾಚರಣೆಯನ್ನು ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ 150 ವರ್ಷ ಗಳ ಸ್ಮರಣ ಸಂಚಿಕೆ ‘ವಿಶ್ವ ಪಥ’ ಹಾಗೂ ಅಂಚೆ ಇಲಾಖೆ ವತಿಯಿಂದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಲಾಯಿತು.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೊ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ, ಪ್ರಾಂಶುಪಾಲ ಡಾ. ಉದಯ್ ಕುಮಾರ್ ಎಂ.ಎ., ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ರಾಮಕೃಷ್ಣ , ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ವಿನಯ್ ರಾಜ್, ಭಾರತೀಯ ಪುರಾತತ್ವ ಇಲಾಖೆ ಅಧೀಕ್ಷಕ ಡಾ. ಶಿವಕಾಂತ್ ಬಾಜಪೇಯಿ ಇವರೆಲ್ಲರೂ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English