ಮತದಾರನ ಒಂದು ಮತ ದೇಶದ ಭದ್ರತೆಯನ್ನು ನಿರ್ಧರಿಸುತ್ತದೆ : ಟಿ.ಸಿ.ಚಂದ್ರನ್ ಅಭಿಪ್ರಾಯ

11:09 AM, Friday, February 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

upanyasa

ಮಡಿಕೇರಿ : ಒಬ್ಬ ಮತದಾರನ ಒಂದು ಮತ ದೇಶದ ಭದ್ರತೆಯನ್ನು ನಿರ್ಧರಿಸುವುದರಿಂದ ಪ್ರತಿಯೊಬ್ಬ ಪ್ರಜೆ ಮತದಾನದ ಹಕ್ಕನ್ನು ಚಲಾಯಿಸಬೇಕೆಂದು ಟಿ.ಸಿ.ಚಂದ್ರನ್ ಅಭಿಪ್ರಾಯಪಟ್ಟರು.

ವಿರಾಜಪೇಟೆಯ ಕಾವೇರಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

upanyasa

ಮತದಾನ ಮಾಡುವವರು ಮಾತ್ರ ದೇಶದ ಪ್ರಜೆಯಾಗಲು ಸಾಧ್ಯ. ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರಕ್ಕೆ ಮತದಾರ ಆಗಲಾರ. ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಹಕ್ಕು ಕೇಳುತ್ತಾರೆ ಆದರೆ ತಮ್ಮ ಕರ್ತವ್ಯವನ್ನು ಯಾಕೆ ಪಾಲಿಸುವುದಿಲ್ಲ ಎಂದು ಪ್ರಶ್ನಿಸಿದ ಚಂದ್ರನ್, ಕರ್ತವ್ಯವನ್ನು ಪಾಲಿಸಿದರೆ ಹಕ್ಕು ತನ್ನಿಂದ ತಾನೆ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಇಟ್ಟಿರ ಕಮಲಾಕ್ಷಿ, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮತದಾನದಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬೆಳೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಆನಂದಕರ್ಲ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಗಾಯತ್ರಿ ಮತ್ತು ವನಿತ್ ಕುಮಾರ್, ಕನ್ನಡ ವಿಭಾಗದ ಪ್ರಾಧ್ಯಾಪಕ ಶಂಕರನಾರಾಯಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಕಾವೇರಪ್ಪ ನಿರೂಪಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English