ಮಂಗಳೂರು :ಕರ್ನಾಟಕ ರಾಜ್ಯಸರ್ಕಾರ ಪ್ರಸಕ್ತ ವರ್ಷದಿಂದಲೇ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು NEET (National Eligibility Entrance Test) ಪರೀಕ್ಷೆ ಬರೆಯುದನ್ನು ಜಾರಿಗೆ ತಂದಿರುವುದನ್ನು ಅಂತ್ಯತ ಅವೈಜ್ಞಾನಿಕ ಕ್ರಮ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಇಂದು ಪ್ರತಿಭಟನೆಯನ್ನು ನಡೆಸಲಾಯಿತು.
ಎ.ಬಿ.ವಿ.ಪಿ. ರಾಜ್ಯ ಕಾರ್ಯದರ್ಶಿ ರಮೇಶ್ ಕೆ ಮಾತನಾಡಿ ರಾಜ್ಯ ಸರಕಾರವು ಈ ಪರೀಕ್ಷೆಯ ಕುರಿತಂತೆ ಕೇಂದ್ರ ಸರಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲೇ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿದೆ. ಎನ್ ಇಇಟಿ ಪರೀಕ್ಷೆ ಇರುವುದು ರಾಷ್ಟ್ರೀಯ ಪಠ್ಯಕ್ರಮದಲ್ಲಿ. ನಮ್ಮ ರಾಜ್ಯದ ವಿದ್ಯಾರ್ಥಿಗಳು ಕಲಿಯುತ್ತಿರುವ ಪಠ್ಯಕ್ರಮಕ್ಕೂ ಇದಕ್ಕೂ ತುಂಬಾ ವ್ಯತ್ಯಾಸವಿದೆ ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದು ಖಂಡಿತ ಎಂದರು.
ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು, ಗುಜರಾತ್, ಮಹಾರಾಷ್ಟ್ರ ಮೊದಲಾದ ರಾಜ್ಯಗಳು ಕೇಂದ್ರವು ಈ ಪರೀಕ್ಷೆಯ ಬಗ್ಗೆ ಪ್ರಸ್ತಾಪಿಸಿದಾಗ ಇದನ್ನು ತೀವ್ರವಾಗಿ ವಿರೋಧಿಸಿವೆ. ಆದರೆ ನಮ್ಮ ಸರಕಾರ ಮಾತ್ರ ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಒತ್ತೆ ಇಟ್ಟು ಎನ್ ಇಇಟಿ ಪರೀಕ್ಷೆ ನಡೆಸಲು ಒಪ್ಪಿಗೆ ಸೂಚಿಸಿದೆ. ಇದು ಸರಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಬಿಂಬಿಸುತ್ತದೆ ಎಂದರು. ಮೊದಲಿಗೆ ರಾಷ್ಟ್ರೀಯ ಪಠ್ಯಕ್ರಮಗಳನ್ನು ಜಾರಿಗೆ ತಂದು ನಂತರ ಈ ಪರೀಕ್ಷೆ ನಡೆಸಲಿ ಎಂದು ಒತ್ತಾಯಿಸಿದರು.
ಎ.ಬಿ.ವಿ.ಪಿ. ನಗರ ಸಂಘಟನಾ ಕಾರ್ಯದರ್ಶಿ ವಿನಯ್ ಹೊರಟ್ಟಿ, ನಗರ ಕಾರ್ಯದರ್ಶಿ ಯತೀಶ್ ಕುಮಾರ್, ಎಸ್.ಡಿ.ಎಂ ಕಾನೂನು ಕಾಲೇಜಿನ ವಿದ್ಯಾರ್ಥಿ ಮುಖಂಡ ಸಚಿನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Click this button or press Ctrl+G to toggle between Kannada and English