ಮಡಿಕೇರಿ : ಪ್ರವಾಸಿ ಬಸ್ ಮಿನಿ ಲಾರಿಗೆ ಡಿಕ್ಕಿ

1:10 PM, Monday, February 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

accident

ಮಡಿಕೇರಿ : ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಪ್ರವಾಸಿ ಬಸ್ಸೊಂದು ಮಿನಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮುಂಭಾಗದ ಕಾರಿಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ 7ನೇ ಮೈಲು ಬಳಿಯಲ್ಲಿ ನಡೆದಿದೆ.

ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಡಿಕ್ಕಿಯಾದ ಪ್ರವಾಸಿ ಬಸ್ ನಂತರ ಬರೆಗೆ ಡಿಕ್ಕಿ ಹೊಡೆದು ನಿಂತಿದೆ.

accident

ಲಾರಿ ಅಳಿಕೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ಗಾಯಗಳಾಗಿಲ್ಲ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುಂಟಿಕೊಪ್ಪ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English