ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪರವಾಗಿ ಇಂದು ಸಿಎಂ ಭೇಟಿ ಮಾಡಿದರು.
ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ದೊರೆಸ್ವಾಮಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ಮುಖ್ಯಮಂತ್ರಿ ಜೊತೆ ಮಾತನಾಡಿ, ಅವರಿಗೆ ಭೂಮಿ ಹಾಗೂ ವಸತಿಯನ್ನು ಸರ್ಕಾರ ನೀಡಿ ನ್ಯಾಯ ಒದಗಿಸಬೇಕು ಎಂದು ದೊರೆಸ್ವಾಮಿ ಒತ್ತಾಯಿಸಿದರು.
Click this button or press Ctrl+G to toggle between Kannada and English