ಮಂಗಳೂರು : ಭಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು,ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮುಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 28 ಗುರುವಾರ ರಜೆ ಘೋಷಿಸಲಾಗಿದೆ.
ಉಡುಪಿಯಲ್ಲೂ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 28 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









