ಮಂಗಳೂರು : ಲಾರಿ ಚಾಲಕನೊಬ್ಬ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬುಧವಾರ ಬೆಳಿಗ್ಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಳಗಾವಿ ಓಬಳಾಪುರ ಮೂಲದ ಕಿರಣ್ ರಾಥೋಡ್ (22) ಮೃತಪಟ್ಟವರು. ಬೆಳಗಾವಿಯಿಂದ ಸ್ಟೀಲ್ ಲೋಡ್ ಅನ್ನು ಕಾಸರಗೋಡಿಗೆ ತಂದಿದ್ದ ರಾಥೋಡ್, ಮತ್ತೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ.
ತಲಪಾಡಿ ಟೋಲ್ ಗೇಟ್ ಎದುರುಗಡೆ ಲಾರಿ ನಿಲ್ಲಿಸಿ ಚಹಾ ಕುಡಿಯಲೆಂದು ರಸ್ತೆಯಲ್ಲಿದ್ದ ಸಂದರ್ಭ ಖಾಸಗಿ ಸಿಟಿ ಬಸ್ಸ್ ಢಿಕ್ಕಿ ಹೊಡೆದಿತ್ತು. ತಲಪಾಡಿಯಿಂದ ಮಂಗಳೂರಿಗೆ ತೆರಳಲು ಪ್ರಯಾಣಿಕರನ್ನು ಹತ್ತಿಸುವ ಭರಾಟೆಯಲ್ಲಿ ಒಮ್ಮಿಂದೊಮ್ಮೆಲೇ ಚಾಲಕ ಬಸ್ಸನ್ನು ತಿರುಗಿಸಿದ ಪರಿಣಾಮವಾಗಿ ರಸ್ತೆ ಬದಿಯಲ್ಲಿದ್ದ ಲಾರಿ ಚಾಲಕನಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ತಲೆಗೆ ಗಂಭೀರ ಗಾಯಗೊಂಡವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English