ವಿದ್ಯಾರ್ಥಿಗಳ ಶೈಕ್ಷಣಿಕ ಸಂಶೋಧನೆಗೆ ಪ್ರೋತ್ಸಾಹ ನೀಡಿ : ಮಂಗಳೂರು ವಿ.ವಿ ಕುಲಪತಿ ಪ್ರೊ.ಯಡಪಡಿತ್ತಾಯ ಸಲಹೆ

10:43 AM, Thursday, February 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

college

ಮಡಿಕೇರಿ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯದ ಬಗ್ಗೆ ಸಂಶೋದನೆ ಮಾಡಲು ಪ್ರೋತ್ಸಾಹಿಸುವುದು ಆದ್ಯ ಕರ್ತವ್ಯ ಎಂದು ಮಂಗಳೂರು ವಿ.ವಿಯ ಕುಲಪತಿಗಳಾದ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಸಾಯನ ಶಾಸ್ತ್ರ ವಿಭಾಗದ ವತಿಯಿಂದ “ನ್ಯಾಶನಲ್ ನೋವೆಲ್ ಅಪ್ರೋಚಸ್ ಇನ್ ಕೆಮಿಕಲ್ ಸೈನ್ಸ್” ಎಂಬ ಶೀರ್ಷಿಕೆಯಡಿಯಲ್ಲಿ ಬುಧವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಜ್ಞಾನವನ್ನು ನೀಡುತ್ತದೆ. ಸೃಜನಶೀಲತೆ ಕಲ್ಪನೆಯಿಲ್ಲದೆ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಂಶೋಧಕರು ಜನರ ಮೇಲೆ ಸಕರಾತ್ಮಕ ಪರಿಣಾಮವನ್ನು ಬೀರುವಂತಹ ಸಂಶೋಧನೆಗಳನ್ನು ಮಾಡಬೇಕು. ರಸಾಯನ ಶಾಸ್ತ್ರದ ಮೂಲಕ ದೇಶವನ್ನು ಅಭಿವೃದ್ಧಿಯಾಗಿಸೋಣ ಎಂದು ಅವರು ಹೇಳಿದರು.

college

ಮಂಗಳೂರು ವಿವಿಯ ರಸಾಯನ ಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ.ಜಿ.ಕೆ.ನಾಗರಾಜ್ ಅವರು “ನ್ಯಾಶನಲ್ ನೋವೆಲ್ ಅಪ್ರೋಚಸ್ ಇನ್ ಕೆಮಿಕಲ್ ಸೈನ್ಸ್” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ರಾಸಾಯನಿಕ ವಿಜ್ಞಾನವು ವಿಶ್ವದ ಅನೇಕ ದೊಡ್ಡ ಸವಾಲುಗಳನ್ನು ಪರಿಹರಿಸಲು ಸಾಮರ್ಥ್ಯವನ್ನು ಹೊಂದಿರುವ ಕ್ಷೇತ್ರವಾಗಿದೆ ಎಂದರು.

ರಾಸಾಯನಿಕ ವಿಜ್ಞಾನವು ಹೆಚ್ಚಳವಾಗಿ ಹವಾಮಾನ ಬದಲಾವಣೆ, ಆಹಾರ ಉತ್ಪಾದನೆಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸುತ್ತದೆ. ಈ ವಿಚಾರ ಸಂಕಿರಣವು ಹೊಸ ಆವಿಷ್ಕಾರಕ್ಕೆ ಅವಕಾಶವನ್ನು ಕಲ್ಪಿಸಿಕೊಡುತ್ತದೆ ಎಂದು ಅವರು ಹೇಳಿದರು.

college

ಶಿವಾಜಿ ವಿವಿಯ ರಸಾಯನಶಾಸ್ತ್ರ ವಿಭಾಗದ ಪ್ರೊ.ಅನಿಲ್ ವಿಥಲ್ ಗುಳೆ, ಕುವೆಂಪು ವಿವಿಯ ಕೈಗಾರಿಕಾ ರಸಾಯನಶಾಸ್ತ್ರದ ಅಧ್ಯಕ್ಷರಾದ ಪ್ರೊ.ಬಿ.ಇ.ಕುಮಾರಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಜಗತ್ ತಿಮ್ಮಯ್ಯ, ರಸಾಯನಶಾಸ್ತ್ರದ ವಿಭಾಗದ ಸಹಾಯಕ ಪ್ರಾಧ್ಯಪಕ ಮತ್ತು ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್, ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಗತ್ ತಿಮ್ಮಯ್ಯ ಅವರು ಸ್ವಾಗತಿಸಿದರು. ಗಣಕಯಂತ್ರ ವಿಜ್ಞಾನದ ಪ್ರಾಧ್ಯಾಪಕರಾದ ರವಿಶಂಕರ್ ಅವರು ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಬಿ.ಎಂ.ಅಮೃತ ಅವರು ನಿರೂಪಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English