ಬೀಜಿಂಗ್ : ಚೀನಾದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಭೀತಿ ಮುಂದುವರೆದಿದೆ. ಇಲ್ಲಿನ ಹುಬೈ ನಗರವೊಂದರಲ್ಲೇ ಬುಧವಾರ ಒಂದೇ ದಿನ 242 ಜನರು ಸಾವನ್ನಪ್ಪಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ. ಹಾಗೇ, ಸಾವಿನ ಭೀತಿ ಎದುರಿಸುತ್ತಿರುವ ಚೀನಾದಲ್ಲಿ 14,840 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಚೀನಾದಲ್ಲಿ ಒಟ್ಟು ಸಾವಿನ ಸಂಖ್ಯೆ 1,355ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರಸ್ನಿಂದಾಗಿ ಚೀನಾದಲ್ಲಿ ಪ್ರತಿದಿನ ನೂರಾರು ಜನ ಸಾವಿಗೀಡಾಗುತ್ತಿದ್ದಾರೆ. ಚೀನಾದಲ್ಲಿ ಇದುವರೆಗೂ 60,000 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಚೀನಾ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರೂ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ಚೀನಾ ದೇಶಾದ್ಯಂತ ಸಾವಿನ ಆತಂಕ ಎದುರಾಗಿದೆ.
ಕೇವಲ ಚೀನಾ ಮಾತ್ರವಲ್ಲದೆ, 20 ಇತರೆ ದೇಶಗಳಲ್ಲೂ ಕೊರೊನಾ ವೈರಸ್ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಿಂದ ಬರುವ ಪ್ರಯಾಣಿಕರು ಮತ್ತು ಚೀನಾಗೆ ತೆರಳುವ ಪ್ರಯಾಣಿಕರ ಮೇಲೂ ನಿರ್ಬಂಧ ವಿಧಿಸಲಾಗಿದೆ. ಹಾಗಿದ್ದರೂ ಕೇರಳದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ.
ಕಳೆದ ಬುಧವಾರ ಜಪಾನಿನ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ 10 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈಗ ಆ ಸಂಖ್ಯೆ ಏರಿಕೆಯಾಗಿದ್ದು, 174ಕ್ಕೂ ಅಧಿಕ ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. . ಈ ಹಡಗಿನಲ್ಲಿ 3700 ಪ್ರಯಾಣಿಕರಿದ್ದರು. ಆ ಹಡಗಿನಲ್ಲಿರುವ ಇಬ್ಬರು ಭಾರತೀಯರಿಗೆ ಕೂಡ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಭಾರತೀಯರು ನೌಕೆಯಲ್ಲಿದ್ದರು. ನೌಕೆಯಲ್ಲಿ ಪ್ರಯಾಣಿಸುವವರಲ್ಲಿ ಮಾರಕ ಕೊರೊನಾ ವೈರಸ್ ತಗುಲಿರುವ ಬಗ್ಗೆ ಅನುಮಾನಗೊಂಡು ಅವರನ್ನೆಲ್ಲಾ ಪರೀಕ್ಷೆಗೆ ಒಳಪಡಿಸಲಾಗಿದೆ. ಫೆಬ್ರವರಿ 19ರವರೆಗೆ ಜಪಾನ್ ಅಧಿಕಾರಿಗಳು ನೌಕೆಯನ್ನು ನಿರ್ಬಂಧಿಸಿದ್ದಾರೆ ಎಂದು ರಾಯಭಾರ ಕಚೇರಿಯ ಹೇಳಿಕೆಯಲ್ಲಿ ತಿಳಿಸಿದೆ.
Click this button or press Ctrl+G to toggle between Kannada and English