ಮಡಿಕೇರಿ : ಗಾಳಿಬೀಡಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 18 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ.
ನವೋದಯ ವಿದ್ಯಾಲಯದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಪೋಷಕರು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಇದೀಗ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ.18 ಲಕ್ಷ ಬಿಡುಗಡೆ ಮಾಡಿದ್ದು, ಕಾಮಗಾರಿ ಆರಂಭಗೊಂಡಿದೆ.
ವಿದ್ಯಾಲಯದ ಪ್ರಾಂಶುಪಾಲ ಐಸಾಕ್, ಶಿಕ್ಷಕರು-ಪೋಷಕರ ಸಮಿತಿ ಸದಸ್ಯರಾದ ಆಶಿಕಾ, ಜಯಕುಮಾರ್, ಪೋಷಕರಾದ ಚಿದಾನಂದ, ಶುಭಕರ್, ನಿರ್ಮಿತಿ ಕೇಂದ್ರದ ಅಧಿಕಾರಿ ರಾಘವೇಂದ್ರ ಮತ್ತಿತರರು ಹಾಜರಿದ್ದರು.
Click this button or press Ctrl+G to toggle between Kannada and English