ಮಡಿಕೇರಿ : ಕನಾ೯ಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್.ಜೈರಾಂ ನೇತೃತ್ವದಲ್ಲಿ ಕನಾ೯ಟಕ ಬೆಳೆಗಾರರ ಒಕ್ಕೂಟದ ನಿಯೋಗವು ರಾಜ್ಯ ಸಕಾ೯ರದ ಉಪಮುಖ್ಯಮಂತ್ರಿ ಡಾ|| ಅಶ್ವಥ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
2017-18 ರ ಬಜೆಟ್ ನಲ್ಲಿ ಸಕಾ೯ರಿ ಭೂಮಿಯನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ರೂಪುಗೊಂಡ ಕರುಡು ನಿಯಮಗಳು ಬೆಳೆಗಾರರ ಪರವಾಗಿ ಇಲ್ಲ. ಎಲ್ಲಾ ಬೆಳೆಗಾರರ ಹಿತದೃಷ್ಟಿಯಿಂದ ಕನಾ೯ಟಕ ಬೆಳೆಗಾರರ ಒಕ್ಕೂಟದ ಸಲಹೆಗಳನ್ನು ಪರಿಗಣಿಸಿ, ಸಕಾ೯ರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬೆಳೆಗಾರರಿಗೆ ನೀಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಇದ್ದರು. ಬೆಳೆಗಾರರ ಒಕ್ಕೂಟದ ಮನವಿ ಸ್ವೀಕರಿಸಿದ ಉಪಮುಖ್ಯಮಂತ್ರಿ ಡಾ||ಅಶ್ವಥ್ ನಾರಾಯಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕನಾ೯ಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀಥ೯ಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English