- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

dehali [1]

ಹೊಸದಿಲ್ಲಿ : ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು.

ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ವರದಿಯ ಪ್ರಕಾರ, ಪೊಲೀಸರು ಮತ್ತು ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡೂ ಕಡೆಗಳಿಂದ ಒಟ್ಟು 30 ಸುತ್ತು ಗುಂಡಿನ ದಾಳಿಯಾಗಿದೆ ಎನ್ನಲಾಗಿದೆ.