ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಡೊನಾಲ್ಡ್​ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್

4:00 PM, Thursday, February 20th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

melaniya-tramp

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್ ಫೆ.24-25ರಂದು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ಮೆಲಾನಿಯಾ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರಂಭಿಸಿರುವ ಹ್ಯಾಪಿನೆಸ್ ಕ್ಲಾಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಫೆ.24ರಂದು ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಭಾರತಕ್ಕೆ ಬಂದಿಳಿಯಲಿದ್ದಾರೆ. ಅಂದು ಅಹಮದಾಬಾದ್ನ ಮೊಟೆರಾದಲ್ಲಿರುವ ನೂತನ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಅಲ್ಲಿಂದ ಆಗ್ರಾಕ್ಕೆ ತೆರಳಲಿದ್ದಾರೆ. ಆಗ್ರಾದಿಂದ ದೆಹಲಿಗೆ ಬರುವ ಟ್ರಂಪ್ ದಂಪತಿ ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪ್ರಧಾನಿ ಮೋದಿ ಮತ್ತು ಟ್ರಂಪ್ ಸಭೆ ನಡೆಸಲಿದ್ದಾರೆ. ಆ ಸಮಯದಲ್ಲಿ ಮೆಲಾನಿಯಾ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ.

ಮೆಲಾನಿಯಾ ಟ್ರಂಪ್ ಭೇಟಿ ನೀಡಲಿರುವ ಶಾಲೆಯಲ್ಲಿ ಮೆಲಾನಿಯಾ ಸ್ವಾಗತಕ್ಕೆಂದು ಭರ್ಜರಿ ತಯಾರಿ ನಡೆಸಲಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೆಲಾನಿಯಾರನ್ನು ಸ್ವಾಗತ ಮಾಡಿಕೊಳ್ಳಲಿದ್ದಾರೆ.

ದೆಹಲಿ ಸರ್ಕಾರಿ ಶಾಲೆಗೆ ಭೇಟಿ ನೀಡುವ ಮೆಲಾನಿಯಾ ಆ ಶಾಲೆಯಲ್ಲಿ ಹ್ಯಾಪಿನೆಸ್ ಕ್ಲಾಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಪಠ್ಯೇತರ ಚಟುವಟಿಕೆಗಳಿಂದ ಶಾಲೆಯ ಮಕ್ಕಳನ್ನು ಯಾವ ರೀತಿಯಲ್ಲಿ ಆ್ಯಕ್ಟಿವ್ ಮಾಡಲಾಗುತ್ತದೆ ಎನ್ನುವುದನ್ನು ನೋಡಲಿದ್ದಾರೆ. ಸುಮಾರು ಒಂದು ಗಂಟೆಯ ಕಾಲ ಮೆಲಾನಿಯಾ ಸರ್ಕಾರಿ ಶಾಲೆಯಲ್ಲಿ ಕಾಲ ಕಳೆಯಲಿದ್ದಾರೆ ಎನ್ನಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English