ಮಾಜಿ ಅರಣ್ಯ ಸಚಿವ ಸಿ. ಚನ್ನಿಗಪ್ಪ ನಿಧನ

10:46 AM, Friday, February 21st, 2020
Share
1 Star2 Stars3 Stars4 Stars5 Stars
(No Ratings Yet)
Loading...

chinnigappa

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ಸಿ. ಚನ್ನಿಗಪ್ಪ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಬೆಳಗ್ಗೆ 8.30ಕ್ಕೆ ಕೊನೆಯುಸಿರೆಳೆದರು.

ಚನ್ನಿಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರಂಸಿಂಗ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಅಷ್ಟೇ ಅಲ್ಲದೇ ಎಚ್. ಡಿ.ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಅರಣ್ಯ ಸಚಿವರಾಗಿದ್ದರು.

ಇಂದು ಸಂಜೆ ಚನ್ನಿಗಪ್ಪ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ. ಆದರೆ ಇನ್ನೂ ಸಹ ಸ್ಥಳ ನಿಗದಿಯಾಗಿಲ್ಲ. ಭೈರನಾಯಕನಹಳ್ಳಿ ಅಥವಾ ನೆಲಮಂಗಲದ ಗೋವಿಂದರಾಜನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೆನ್ನಿಗಪ್ಪ ನಿಧನಕ್ಕೆ ಎಚ್ಡಿಕೆ ಸಂತಾಪ : ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ ಅವರು ಪಕ್ಷದ ಬೆಳವಣಿಗೆಯಲ್ಲಿ ಬಹುವಾಗಿ ಶ್ರಮಿಸಿದ್ದರು. ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಕೋರುತ್ತೇನೆ ಎಂದು ಎಚ್ಡಿಕೆ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English