ಅಮೂಲ್ಯ ವಿರುದ್ಧ ಅಸಮಾಧಾನ : ಮಡಿಕೇರಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

9:57 AM, Saturday, February 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

hindhu-protest

ಮಡಿಕೇರಿ : ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ

ನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಮೂಲ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಜಿತ್ ಕುಕ್ಕೇರ ಭಾರತ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನ ಎರಡೂ ಸದನದಲ್ಲಿ ಅಂಗೀಕರಿಸಿದ ನಂತರ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರು ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಜನತೆಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಮನವರಿಕೆ ಮಾಡಿದ್ದಾರೆ. ಆದರೂ ದೇಶದಾದ್ಯಂತ ಒಂದು ಗುಂಪು ಕಾಯ್ದೆಯನ್ನು ವಿರೋಧಿಸುವ ಭರದಲ್ಲಿ ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಈ ದೇಶದ ಸೌಲಭ್ಯ ಪಡೆದುಕೊಂಡು ಪ್ರತಿಯೊಬ್ಬ ಭಾರತೀಯನು ದೇಶಕ್ಕೆ ಗೌರವವನ್ನು ನೀಡುವ ಕಾರ್ಯ ಮಾಬೇಕು. ಆದರೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರೆಂಟ್ ಸಂಘಟನೆ ಆಯೋಜಿಸಿದ್ದ ಸಭೆಯಲ್ಲಿ ಅಮೂಲ್ಯ ಲಿಯೋನ್ ಎಂಬಾಕೆ ದೇಶದ್ರೋಹದ ಘೋಷಣೆ ಕೂಗಿದ್ದು, ಇದು ಅಕ್ಷಮ್ಯ ಅಪರಾಧವಾಗಿದೆ. ಅಮೂಲ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ದೇಶವಿರೋಧಿ ಕೃತ್ಯಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಪಾಕ್ ಪರ ಘೋಷಣೆ ಕೂಗುವ ದೇಶ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಯತ್ನ ಮಾಡಬಾರದು. ಇಂತಹ ದೇಶ ದ್ರೋಹಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಮತ್ತು ಸಿಎಎ ಕಾಯ್ದೆ ವಿರುದ್ಧ ಸಭೆ ಆಯೋಜಿಸಿದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೂ ಜಾಗರಣ ವೇದಿಕೆಯ ನಗರ ಸಂಚಾಲಕ ಮಹೇಶ್, ಭಜರಂಗದಳದ ಜಿಲ್ಲಾ ಸಂಚಾಲಕ ಚೇತನ್ ಪ್ರಮುಖರಾದ ಸುಧೀಂದ್ರ ಶೆಟ್ಟಿ, ನಂದೀಶ್ ಕುಮಾರ್, ಬಿಜೆಪಿಯ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಅನಿತಾ ಪೂವಯ್ಯ, ಪಿ.ಎಂ.ರವಿ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English