ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್

4:09 PM, Monday, February 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

DCM

ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ  ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು.

ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ ಪೂರೈಸುತ್ತೆ ಅಂತಿದಾರೆ. ವಿರೋಧ ಪಕ್ಷಗಳೇ ಬೆಂಬಲ ನೀಡಿದ್ದರಿಂದ ಸಮಸ್ಯೆ ಎಲ್ಲಿಂದ ಬರುತ್ತದೆ ಎಂದರು.

ಸಿಎಂ ವಿರುದ್ದ ಅನಾಮಧೇಯ ಪತ್ರದ ವಿಚಾರವಾಗಿ ಮಾತನಾಡಿದ ಅವರು ಯಾರೋ ಅನಾಮಧೆಯರು ಬರೆದ ಪತ್ರವದು. ಅದಕ್ಕೆ ಮಹತ್ವ ಕೊಡಬೇಕಾಗಿಲ್ಲ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದು ಖಚಿತ. ಬಿಜೆಪಿಯಲ್ಲಿ ಯಾವುದೇ ಆಂತರಿಕ ತಿಕ್ಕಾಟ ಇಲ್ಲ. ಎಲ್ಲರೂ ಒಂದಾಗಿದ್ದೆವೆ ಎಂದರು.

15ನೇ ಹಣಕಾಸಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಬರುವ ಅನುದಾನದಲ್ಲಿ ಕಡಿತವಾಗಿರುವ ವಿಚಾರದಲ್ಲಿ ಮಾತನಾಡಿದ ಅವರು, ಹಣಕಾಸಿನ ಆಯೋಗದ ಮಾನದಂಡಗಳಿಂದಾಗಿ ಅನುದಾನ ಹಂಚಿಕೆಯಲ್ಲಿ ಏರುಪೇರಾಗಿದೆ. ತೆರಿಗೆ ಬಿಡುಗಡೆಯಲ್ಲಿಯೂ ಸಮಸ್ಯೆಯಾಗಿದೆ. ಇದರಿಂದ ರಾಜ್ಯಕ್ಕೆ ಬರೋ ಅನುದಾನದಲ್ಲಿ ಕಡಿತವಾಗಿದೆ. ಈ ಸಂಬಂಧ ಈಗಾಗಲೇ ಕೇಂದ್ರದ ಜೊತೆ ಚರ್ಚಿಸಲಾಗಿದೆ. ರಾಜ್ಯಕ್ಕೆ ಆಗುತ್ತಿರುವ ತೊಂದರೆ ಕುರಿತು ಮನವರಿಕೆ ಮಾಡಿಕೊಡಲಾಗುವುದು ಎಂದು ಡಿಸಿಎಂ ವಿವರಣೆ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English