ಬೆಂಗಳೂರು : ಕೆಎಸ್ಆರ್ಟಿಸಿ ಈಶಾನ್ಯ, ವಾಯುವ್ಯ ಸಾರಿಗೆ ಮತ್ತು ಬಿಎಂಟಿಸಿ ಬಸ್ ಟಿಕೆಟ್ ಪ್ರಯಾಣ ದರವನ್ನು ಶೇ.12ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು ಪರಿಷ್ಕೃತ ದರ ಇಂದಿನಿಂದ ಚಾಲ್ತಿಗೆ ಬರಲಿದೆ.
ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಕಳೆದ ಕೆಲ ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ಬಸ್ ಟಿಕೆಟ್ ದರ ಏರಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ, ಪ್ರಯಾಣ ದರ ಏರಿಸಿರುವ ಸರ್ಕಾರ ವಿದ್ಯಾರ್ಥಿಗಳ ಹಾಗೂ ವಿಕಲಚೇತನರ ಪಾಸ್ ದರವನ್ನು ಏರಿಸಲು ಮುಂದಾಗಿಲ್ಲ.
ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಕಳೆದ ಹಲವು ವರ್ಷಗಳಿಂದ ವಾರ್ಷಿಕ ನೂರಾರು ಕೋಟಿ ನಷ್ಟದಲ್ಲಿದೆ. ಆದರೂ ಈವರೆಗೆ ಟಿಕೆಟ್ ದರವನ್ನು ಏರಿಸಲಾಗಿರಲಿಲ್ಲ.ಆದರೆ, ಈ ಬಾರಿ ನಷ್ಟದ ಪ್ರಮಾಣ ಅಧಿಕವಾಗಿದ್ದು, ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎನ್ನಲಾಗುತ್ತಿದೆ. ಪರಿಷ್ಕೃತ ದರ ಇಂದಿನಿಂದ ಚಾಲ್ತಿಗೆ ಬರಲಿದ್ದು, ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.
Click this button or press Ctrl+G to toggle between Kannada and English