ಅಲೆಮಾರಿ ಬುಡಕಟ್ಟು ಶಿಳ್ಳೆಕ್ಯಾತ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮನವಿ

9:31 AM, Thursday, February 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

alemari-budakattu

ಮಂಗಳೂರು : ಮಂಗಳೂರು ನಗರ ವ್ಯಾಪ್ತಿ ಮಿತಿಯಲ್ಲಿ ಹರಿಯುತ್ತಿರುವ ನೇತ್ರಾವತಿ , ಗುರುಪುರ ನದಿ ಪಾತ್ರ ಮತ್ತು ತೋಕೂರುಗಳಲ್ಲಿ ಸುಮಾರು 7 ಪ್ರದೇಶದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ತೆಪ್ಪಗಳ ಮೂಲಕ ನದಿಯಲ್ಲಿ ಬಲೆ ಬೀಸಿ ಮೀನು ಹಿಡಿದು ಮಾರಾಟ ಮಾಡುವ ಕಷ್ಟದಾಯಕ ಮತ್ತು ಅಪಾಯಕಾರಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಪ್ರಸ್ತುವ ಇವರು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ಬುಡಕಟ್ಟು ಸಮುದಾಯ ಆಗಿರುವ ಇವರ ಬದುಕಿಗೆ ಜಿಲ್ಲಾಡಳಿತವು ಸರಕಾರದ ಕಲ್ಯಾಣಾಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ಜ್ಯಾರಿಗೊಳಿಸುವ ಮೂಲಕ ಸಾಮಾಜಿಕ , ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಮುಂದಡಿಯಿಡಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ. ಈ ಹಿನ್ನಲೆಯಲ್ಲಿ ಕೆಳಕಂಡ ಬೇಡಿಕೆಗಳ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿ ದ.ಕ ಜಿಲ್ಲಾಧಿಕಾರಿಯವರಿಗೆ ತಾ. 26-02-2020ರಂದು ಮನವಿ ಅರ್ಪಿಸಲಾಯಿತು.

ಬೇಡಿಕೆಗಳು:
1. ಜಿಲ್ಲಾಡಳಿತವು ವಿವಿಧೆಡೆಗಳಲ್ಲಿ ಟೆಂಟ್ ಗಳಲ್ಲಿ ವಾಸಿಸುತ್ತಿರುವ ಶಿಳ್ಳೆಕ್ಯಾತ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿನ್ನಲೆಯ ಸರ್ವೆ ನಡೆಸುವುದು.

2. ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಆರೋಗ್ಯ ಕಾರ್ಡು, ಮತ್ತು ಇತರೆ ಗುರುತಿನ ಕಾರ್ಡುಗಳನ್ನು ವಿತರಿಸುವುದು.

3. ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಉಚಿತ ಮನೆ ನಿವೇಶನ ಒದಗಿಸುವುದು.

4. ಪ್ರಸ್ತುವ ವಾಸಿಸುತ್ತಿರುವ ಟೆಂಟ್ ಗಳಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ದಾರಿ, ವಿದ್ಯುತ್ ಮತ್ತು ಶೌಚಾಲಯದ ವ್ಯವಸ್ಥೆ ಮಾಡುವುದು.

5. ಅಲೆಮಾರಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಕೋಶದ ಸೌಲಭ್ಯಗಳನ್ನು ಈ ಟೆಂಟ್ ಪ್ರದೇಶಗಳಿಗೆ ಅಳವಡಿಸುವುದು.

6. ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಮೀನುಗಾರಿಕಾ ವೃತ್ತಿಯಲ್ಲಿ ನಿರತರಾಗಿರುವಾಗ ನಡೆಯುವ ದೌರ್ಜನ್ಯ ಘಟನೆಗಳನ್ನು ಸಂಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದು.

ಆದುದರಿಂದ ದಯಾಳುಗಳಾದ ತಾವು ಕೂಡಲೇ ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.

ನಿಯೋಗದಲ್ಲಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವ ಸಲಹೆಗಾರರಾದ ಡಾ ಕೃಷ್ಣಪ್ಪ ಕೊಂಚಾಡಿ, ಸಮಿತಿ ಗೌರವಾದ್ಯಕ್ಷರಾದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಅದ್ಯಕ್ಷರಾದ ರವಿ, ಕಾರ್ಯದರ್ಶಿ ವೆಂಕಟೇಶ್,ಶಿಳ್ಳೆಕ್ಯಾತ ಸಮುದಾಯದ ಲೋಕೇಶ್, ಲಕ್ಷ್ಮಣ, ರಘ, ಶಿವಪ್ಪ, ಅಶೋಕ್, ಆನಂದ ,ಮಧು ಮುಂತಾದವರು ಉಪಸ್ಥಿತರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English