ಕುಶಾಲನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ

5:31 PM, Thursday, February 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

SDPI

ಮಡಿಕೇರಿ : ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದಾಳಿಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಕುಶಾಲನಗರ ಎಸ್.ಡಿ.ಪಿ.ಐ ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ಕಾರ್ಯಪ್ಪ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ತಾಲ್ಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹನೀಫ್, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಎದುರಿಸಲಾಗುವುದು ಎಂದು ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರ ಹೇಳಿಕೆಯ ಬೆನ್ನಲ್ಲೇ ಈ ಘರ್ಷಣೆ ನಡೆದಿದೆ. ದುಷ್ಕರ್ಮಿಗಳು ಧರ್ಮವನ್ನು ವಿಚಾರಿಸುತ್ತಾ ಮುಸ್ಲಿಮರ ಮೇಲೆ ತೀವ್ರ ತರವಾದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹನೀಫ್ ಇಡೀ ಮಾಧ್ಯಮಗಳ ಗಮನವು ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಲ್ಲಿದ್ದಾಗ ಅದು ನಡೆಸಲಾಗಿದೆ.

ಸಿಎಎ ಬೆಂಬಲಿಗರು ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ದಾಳಿಗೊಳಗಾಗಿರುವ ಅಲ್ಪಸಂಖ್ಯಾತರಲ್ಲಿ ವಿಶ್ವಾಸವನ್ನು ಮರಳಿ ತರಲು ದೆಹಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಈ ಹೋರಾಟ ಉಗ್ರ ಸ್ವರೂಪವನ್ನು ತಾಳಲಿದೆ ಎಂದರು.

ಈ ಸಂದರ್ಭ ಎಸ್.ಡಿ.ಪಿ.ಐ ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English