ಖ್ಯಾತ ಇತಿಹಾಸ ತಜ್ಞ ಮತ್ತು ಸಾಹಿತಿ ಪ್ರೊ. ಷ. ಶೆಟ್ಟರ್​ ವಿಧಿವಶ

10:28 AM, Friday, February 28th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

sha-shetttar

ಬೆಂಗಳೂರು : ಕನ್ನಡಕ್ಕೆ ರಾಷ್ಟ್ರೀಯ ಸ್ಥಾನಮಾನವನ್ನು ದೊರಕಿಸಿಕೊಡಲು ಸಾಕಷ್ಟು ಪ್ರಯತ್ನಪಟ್ಟಿದ್ದ ಖ್ಯಾತ ಇತಿಹಾಸ ತಜ್ಞ ಮತ್ತು ಸಾಹಿತಿ ಪ್ರೊ. ಷ. ಶೆಟ್ಟರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ 1 ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಷ. ಶೆಟ್ಟರ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಶ್ವಾಸಕೋಶದಲ್ಲಿ ನೀರು ತುಂಬಿದ್ದರಿಂದ ಷ. ಶೆಟ್ಟರ್ ಅವರ ಉಸಿರಾಟಕ್ಕೆ ತೊಂದರೆಯಾಗಿತ್ತು. ಬನ್ನೇರುಘಟ್ಟದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೆಟ್ಟರ್ ಇಂದು ಬೆಳಗ್ಗೆ 3 ಗಂಟೆಗೆ ನಿಧನರಾಗಿದ್ದಾರೆ. ಭೂಪಸಂದ್ರದಲ್ಲಿರುವ ಶೆಟ್ಟರ್ ನಿವಾಸದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದೆ. ಷ. ಶೆಟ್ಟರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.

ಪ್ರೊ. ಷಡಕ್ಷರಪ್ಪ ಶೆಟ್ಟರ್ 1935ರಲ್ಲಿ ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ ಜನಿಸಿದ್ದ ಇವರು ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ ಪಡೆದಿದ್ದರು. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಷ. ಶೆಟ್ಟರ್ ಸಂಶೋಧನೆಗಳ ಕೊಡುಗೆ ಪ್ರಮುಖವಾದುದು. 6 ವಿದೇಶಿ ವಿಶ್ವವಿದ್ಯಾಲಯಗಳಾದ ಕೇಂಬ್ರಿಜ್, ಹಾರ್ವರ್ಡ್, ಹೈಡಲ್ ಬರ್ಗ್, ಅಥೆನ್ಸ್, ಲೈಡನ್, ಮಾಸ್ಕೋ ಯೂನಿವರ್ಸಿಟಿಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English