ಯುವ ಜನತೆಯು ಸಾಹಿತ್ಯದಲ್ಲಿ ಅಭಿರುಚಿ ಮೂಡಿಸಿಕೊಳ್ಳಬೇಕು

3:24 PM, Friday, February 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

sahitya

ಮಂಗಳೂರು : ಯುವ ಜನತೆಯು ಸಾಹಿತ್ಯದಲ್ಲಿ ಅಭಿರುಚಿ ಮೂಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರ ಮಾರ್ಗದರ್ಶನದೊಂದಿಗೆ ಹಮ್ಮಿಕೊಳ್ಳಲಿದೆ ಎಂದು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ವಿಜಯಲಕ್ಷ್ಮಿ.ಬಿ. ಶೆಟ್ಟಿ ನುಡಿದರು. ಅವರು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ವಿವಿಧ ದತ್ತಿ ಕಾರ್ಯಕ್ರಮಗಳನ್ನು ವಿವಿಧ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಸರ್ವರನ್ನೂ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಲುಬುರ್ಗಿ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿತರಾಗಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಪದ್ಮನಾಭ ಭಟ್ ಎಕ್ಕಾರು ಅವರನ್ನು ಅಭಿನಂದಿಸಲಾಯಿತು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಕೋಶಾಧಿಕಾರಿ ಪ್ರೋ. ಕೃಷ್ಣ ಮೂರ್ತಿ ಸ್ವಾಗತಿಸಿದರು. ಡಾ. ಪದ್ಮನಾಭ ಭಟ್ ಎಕ್ಕಾರು ವಂದಿಸಿದರು.

ಕಾರ್ಯಕಾರಿ ಸಮಿತಿ ಸದಸ್ಯರಾದ ರಘು ಇಡ್ಕಿದು, ವಿಜಯಲಕ್ಷ್ಮಿ ಭಟ್ ಉಳುವಾನ, ಜಯಲಕ್ಷ್ಮಿ ಬಿ. ಆರ್, ಅರುಣಾ ಕುಮಾರಿ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English