ಮಂಗಳೂರು : ಕರಾವಳಿ ಜಿಲ್ಲೆಯ ಲ್ಲಿ ನಡೆಯುವ ಪತ್ರಕರ್ತರ ಸಮ್ಮೆಳನ ರಾಜ್ಯಕ್ಕೆ ಮಾದರಿ ಸಮ್ಮೇಳನವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾರ್ಚ್ 7 ಹಾಗೂ ಮಾರ್ಚ್ 8 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನ ದಲ್ಲಿ ನಡೆಯಲಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಯನ್ನು ಅವರು ಶುಕ್ರವಾರ ಸಂಜೆ ಬಿಡುಗಡೆಗೊಳಿಸಿ ಮಾತನಾಡಿದರು.
ರಾಜ್ಯದಲ್ಲಿ ಸಾಕಷ್ಟು ಮಂದಿ ಕರಾವಳಿಯ ಪತ್ರಕರ್ತರು ಖ್ಯಾತಿಯನ್ನು ಪಡೆದವರಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಪತ್ರಕರ್ತರ ರಾಜ್ಯ ಮಟ್ಟದ ಸಮ್ಮೇಳನ ನಡೆಯುತ್ತಿರುವುದು ನಮ್ಮಲ್ಲೂ ಕುತೂಹಲವನ್ನು ಮೂಡಿಸಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ,ಏಷ್ಯಾ ಪತ್ರಕರ್ತರ ಸಂಘದ ಸಂಚಾಲಕ ಹೆಚ್ ಬಿ ಮದನ ಗೌಡ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು
ಈ ಸಂದ ರ್ಭದ ಲ್ಲಿ ,ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ, ಪಿಲಿಕುಳ ನಿಸರ್ಗ ಧಾಮದ ಆಡಳಿತ ನಿರ್ದೇಶಕಿ ಮೇಘನಾ ಆರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ , ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮತ್ತಿತರರು ಉಪಸ್ಥಿತರಿದ್ದರು
Click this button or press Ctrl+G to toggle between Kannada and English