- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ವೈರಸ್‌ ಬಗ್ಗೆ ಆತಂಕ ಬೇಡ : ಶ್ರೀರಾಮುಲು, ಸುಧಾಕರ್‌

coronavirus [1]

ಬೆಂಗಳೂರು : ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ರಾಜ್ಯ ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೊರೊನಾ ಬಗ್ಗೆ ಯಾವುದೇ ಆತಂಕ ಬೇಡ. ಸರಕಾರ ಎಲ್ಲಾ ರೀತಿಯ ಎಚ್ಚರಿಕೆಗಳನ್ನು ಕೈಗೊಂಡಿದೆ. ವೈರಸ್ ಕಾಣಿಸಿಕೊಂಡ ತೆಲಂಗಾಣದ ವ್ಯಕ್ತಿಯ ಜೊತೆಗೆ ಕೆಲಸ ಮಾಡುತ್ತಿದ್ದ ಎಲ್ಲರಿಗೂ ಮನೆಯಲ್ಲಿ ಇರುವಂತೆ ಸೂಚಿಸಿದೆ. ಬಸ್‌ನಲ್ಲಿ ಇದ್ದವರನ್ನು ತಪಾಸಣೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು, ಏರ್‌ಪೋರ್ಟ್‌ನಿಂದ ಬರುವವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. 245 ಜನರ ರಕ್ತ ಪರೀಕ್ಷೆ ಮಾಡಲಾಗಿದೆ. ಆದರೆ ಯಾರಲ್ಲೂ ಪಾಸಿಟಿವ್ ಬಂದಿಲ್ಲ. ಕಂಪನಿಯಲ್ಲಿ 25 ಜನರು ಕೆಲಸ ಮಾಡುತ್ತಿದ್ದರು ಅವರನ್ನು ಗುರುತಿಸಲಾಗಿದೆ. ಅವರೆಲ್ಲರೂ 14 ದಿನ ಮನೆಯಲ್ಲಿ ಇರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜತೆಗೆ, ಕೊರೊನಾ ಪರೀಕ್ಷೆ ನಡೆಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಎರಡು ಲ್ಯಾಬ್‌ಗಳನ್ನು ತೆರೆಯಲಾಗಿದೆ. ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆ ಹಾಗೂ ಬೆಂಗಳೂರು ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಘಟಕಗಳನ್ನು ತೆರೆಯಲಾಗಿದೆ ಎಂದೂ ಆರೋಗ್ಯ ಸಚಿವ ಶ್ರೀರಾಮಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜಂಟಿ ಸುದ್ದಿಗೋಷ್ಠಿ ವೇಳೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಕೊರೊನಾ ಭೀತಿ, ನಗರದಲ್ಲಿ ಓಡಾಡಿದ್ದ ಹೈದರಾಬಾದ್‌ ಸೋಂಕು ಪೀಡಿತ ಟೆಕ್ಕಿ! ಇನ್ನು, ಸೋಂಕು ಪತ್ತೆಗೆ 14 ದಿನ ಕಾಲಾವಕಾಶ ಬೇಕು. ಆದರೆ ಶಂಕಿತರನ್ನು 28 ದಿನಗಳ ಕಾಲ ನಿಗಾದಲ್ಲಿ ಇಡಲಾಗುತ್ತಿದೆ. ಆದರೆ ಶಂಕಿತರನ್ನು 28 ದಿನಗಳ ಕಾಲ ನಿಗಾದಲ್ಲಿ ಇಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ, ತೆಲಂಗಾಣದಿಂದ ಬಂದ ವ್ಯಕ್ತಿ ಬೆಂಗಳೂರಿಗೆ ಫೆಬ್ರವರಿ 20ರಂದು ಬಂದಿದ್ದರು. ಇಲ್ಲಿ ಒಂದು ದಿನ ಕೆಲಸ ಮಾಡಿದ್ದರು, ಮರು ದಿನ ತೆಲಂಗಾಣಕ್ಕೆ ಹೋಗಿದ್ದಾರೆ. ಆದ್ದರಿಂದ ಇಲ್ಲಿ ಯಾರಿಗೂ ಸಮಸ್ಯೆ ಕಾಣಿಸುವ ಸಾಧ್ಯತೆ ಇಲ್ಲ. ನಾವು ಎಲ್ಲಾ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇವೆ ಎಂದು ಸುಧಾಕರ್‌ ಸುದ್ದಿಗೋಷ್ಠಿ ವೇಳೆ ಮಾಹಿತಿ ನೀಡಿದ್ದಾರೆ.