ಕೊರೊನಾ ಆತಂಕ : ಕರಾವಳಿಯಾದ್ಯಂತ ಮುನ್ನೆಚ್ಚರಿಕೆ ಘೋಷಣೆ

10:00 AM, Wednesday, March 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

karavali

ಮಂಗಳೂರು : ದೇಶಾದ್ಯಂತ ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳು ಬಿಗಿಗೊಳ್ಳುತ್ತಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿಯೂ ಮುಂಜಾಗ್ರತಾ ಕ್ರಮ ಮುಂದುವರಿದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹಾಗೂ ನವಮಂಗಳೂರು ಬಂದರಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವವರ ತಪಾಸಣ ಕಾರ್ಯ ಮುಂದುವರಿಯುತ್ತಿದ್ದು, ಈವರೆಗೆ 20 ಸಾವಿರ ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಯಾವುದೇ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ವೆನ್ಲಾಕ್  ಆಸ್ಪತ್ರೆಯಲ್ಲಿ 19 ಬೆಡ್‌ ಸಾಮರ್ಥ್ಯದ ಐಸೋಲೇಟೆಡ್‌ ವಾರ್ಡ್‌. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲೂ ಪ್ರತ್ಯೇಕ ವಾರ್ಡ್‌ ಮಾಡಲಾಗಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಕರಣ ಕಂಡು ಬಂದಲ್ಲಿ ಇದನ್ನು ಬಳಸಲಾಗುತ್ತದೆ. ಆರೋಗ್ಯ ಸಿಬಂದಿ ಈಗಾಗಲೇ ಈ ವಾರ್ಡ್‌ನಲ್ಲಿ ಲಭ್ಯವಿದ್ದಾರೆ.

ಕೆಎಸ್ಸಾರ್ಟಿಸಿಯಲ್ಲಿ ಘೋಷಣೆ ಕೊರೊನಾ ವೈರಸ್‌ನ ಲಕ್ಷಣಗಳು, ವೈರಸ್‌ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಲ್ಲ ಬಸ್‌ ನಿಲ್ದಾಣಗಳಲ್ಲಿ ಘೋಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಕೇಂದ್ರದಿಂದ ಸೂಚನೆ ಬಂದ ಹಿನ್ನೆಲೆ ಯಲ್ಲಿ ಬಸ್‌ ನಿಲ್ದಾಣಗಳಲ್ಲಿ ಈ ವ್ಯವಸ್ಥೆ
ಮಾಡಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್‌ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನೆರೆಯ ಕೇರಳ, ಬೆಂಗಳೂರು ಮೂಲದ ವ್ಯಕ್ತಿಗಳಲ್ಲಿ ವೈರಸ್‌ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೊರೊನಾ ಪೀಡಿತ ದೇಶದಿಂದ ಹಾಗೂ ಇತರ ಭಾಗದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತು ನವ ಮಂಗಳೂರು ಬಂದರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲ ಪ್ರಯಾಣಿಕರನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಜನ ಕೊರೊನಾ ವೈರಸ್‌ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ; ಎಚ್ಚರಿಕೆ ವಹಿಸಬೇಕು. ಎಂದು ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿರವರು ಹೇಳಿದರು.

ಕೊರೋನಾ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರಿಸಲಾಗಿದೆ. ಎಂದು ಸುಧೀರ್‌ಚಂದ್ರ ಸೂಡ, ಜಿಲ್ಲಾ ಆರೋಗ್ಯಾಧಿಕಾರಿಗಳು, ಉಡುಪಿ ಹೇಳಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English